Publish Date: Wed, 24 Jun 2020 (20:30 IST)
Updated Date: Wed, 24 Jun 2020 (20:32 IST)
ವಿಧಾನ ಪರಿಷತ್ ಗೆ ನೂತನವಾಗಿ ಆಯ್ಕೆಯಾಗಿರುವ ಮಾಜಿ ಸಚಿವರೊಬ್ಬರು ಸಚಿವ ಸ್ಥಾನ ಕೊಡುವಂತೆ ಆಗ್ರಹ ಮಾಡಿದ್ದಾರೆ.
ಕಲಬುರಗಿ ಜಿಲ್ಲೆಯ ಒಬ್ಬರಿಗಾದರೂ ಸಚಿವ ಸ್ಥಾನ ಕೊಡಬೇಕು. ನಾನು ಸಚಿವ ಸ್ಥಾನದ ರೇಸ್ ನಲ್ಲಿ ಇಲ್ಲ ಎಂದು ವಿಧಾನ ಪರಿಷತ್ ನೂತನ ಸದಸ್ಯ ಸುನೀಲ್ ವಲ್ಯಾಪುರೆ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕ ಮುಖ್ಯ ಜಿಲ್ಲಾ ಕೇಂದ್ರವಾಗಿರುವ ಕಲಬುರಗಿ ಜಿಲ್ಲೆಯಲ್ಲಿ ಐದು ಜನರು ಬಿಜೆಪಿ ಶಾಸಕರಿದ್ದಾರೆ. ಅವರಲ್ಲಿ ಯಾರೊಬ್ಬರಿಗಾದರೂ ಸಚಿವ ಸ್ಥಾನ ಕೊಡಬೇಕು ಎಂದಿದ್ದಾರೆ.