Publish Date: Sat, 08 Aug 2026 (18:33 IST)
Updated Date: Sat, 08 Aug 2026 (18:38 IST)
ಬೆಂಗಳೂರು: ರಾಜ್ಯದ ಅತಿದೊಡ್ಡ ಹಗರಣಗಳಲ್ಲಿ ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಯು ಒಂದಾಗಿ ಕಾಣುತ್ತಿದೆ ಎಂದು ರಾಜ್ಯ ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ಹೀಗಾಗಿ ಕೂಡಲೇ ನೈಸ್ ಯೋಜನೆಯನ್ನು ರಾಜ್ಯ ಸರಕಾರ ಸ್ವಾಧೀನಪಡಿಸಿಕೊಳ್ಳಬೇಕು ಹಾಗೂ ತಕ್ಷಣವೇ ಟೋಲ್ ಸಂಗ್ರಹ ನಿಲ್ಲಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.
ಜೆಡಿಎಸ್ ಪಕ್ಷದ ಕೇಂದ್ರ ಕಚೇರಿ ಜೆ.ಪಿ. ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಚಿವರು; ಹೈಕೋರ್ಟ್ ತೀರ್ಪಿನಂತೆ ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು. ವಾಹನ ಸವಾರರು ಟೋಲ್ ಕಟ್ಟಬಾರದು ಎಂದು ಕರೆ ನೀಡಿದರು.
ನೈಸ್ ಕಂಪನಿಯ ಅಕ್ರಮಗಳ ಬಗ್ಗೆ ಹೈಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯದಿಂದ ಇನ್ನಾದರೂ ರಾಜ್ಯ ಸರಕಾರ ಕಣ್ತೆರೆಯಬೇಕು. ಯೋಜನೆಯಲ್ಲಿ ಅಕ್ರಮಗಳು ನಡೆದಿವೆ ಹಾಗೂ ವಾಹನ ಸವಾರರಿಂದ ಅಕ್ರಮವಾಗಿ ಟೋಲ್ ಸುಲಿಗೆ ಮಾಡಲಾಗುತ್ತಿದೆ ಎಂದು ಹೇಳಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ