Webdunia - Bharat's app for daily news and videos

Install App

ನಿಜಾಮುದ್ದೀನ್ ಮಸೀದಿ ಪ್ರಕರಣ: ಪ್ರಧಾನಿ ಮೋದಿ ಹೀಗಾ ಹೇಳೋದು

Webdunia
ಗುರುವಾರ, 2 ಏಪ್ರಿಲ್ 2020 (16:47 IST)
ದೇಶವನ್ನೇ ತಲ್ಲಣಗೊಳಿಸುತ್ತಿರುವ ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಪಾಲ್ಗೊಂಡವರ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ.

ವಿವಿಧ ರಾಜ್ಯಗಳ ಸಿಎಂ ಗಳ ಜೊತೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಪ್ರಧಾನಿಗೆ ದೆಹಲಿ ಸಿಎಂ ಹಾಗೂ ರಾಜ್ಯದ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಾಹಿತಿ ನೀಡಿದ್ದಾರೆ.

ದೆಹಲಿಯ ನಿಜಾಮುದ್ದೀನ್‍ನಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡ 391 ಜನರನ್ನು ಈಗಾಗಲೇ ಗುರುತಿಸಿ ಹೋಮ್ ಕ್ವಾರಂಟೈನ್/ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇಡಲಾಗಿದೆ. ಇನ್ನುಳಿದವರನ್ನೂ ಪತ್ತೆ ಮಾಡಲಾಗುತ್ತಿದೆ. ಇವರು ಧರ್ಮಪ್ರಚಾರ ಮತ್ತು ಇತರ ಚಟುವಟಿಕೆಗಳಿಗಾಗಿ ವಿವಿಧ ಜಿಲ್ಲೆಗಳಿಗೆ ತೆರಳಿ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅಲ್ಲಿಯೇ ಸಿಲುಕಿಕೊಂಡಿರುವ ಸಾಧ್ಯತೆ ಇದೆ. ಇವರು ಎಲ್ಲಿದ್ದಾರೆಯೋ ಅಲ್ಲಿಯೇ ಕ್ವಾರಂಟೈನ್ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಈ ಬಗ್ಗೆ ವ್ಯಾಪಕ ವಿಚಾರಣೆ ಮತ್ತು ತಾಂತ್ರಿಕ ಪ್ರಯತ್ನಗಳ ಅಗತ್ಯವಿದೆ.

ಇವರನ್ನು ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ. ಅವರಲ್ಲಿ ಬೀದರ್‍ನಲ್ಲಿ 91 ಜನರನ್ನು ಪರೀಕ್ಷಿಸಲಾಗಿದ್ದು, 11 ಜನರಿಗೆ ಕೋವಿಡ್ 19 ಸೋಂಕು ಪತ್ತೆಯಾಗಿದೆ.  ಬೆಂಗಳೂರಿನಲ್ಲಿ 30 ಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಲಾಗಿದ್ದು, ಅವರಿಗೆ ಸೋಂಕು ತಗಲದೆ ಇರುವುದು ತಿಳಿದು ಬಂದಿದೆ.

ಕೋವಿಡ್ 19 ನ್ನು ಸಮರ್ಥವಾಗಿ ನಿಯಂತ್ರಿಸಲು ಎಲ್ಲ ಧರ್ಮಗುರುಗಳು ಸಹಕರಿಸಬೇಕು. ತಮ್ಮ ಸಮುದಾಯದ ಜನರಲ್ಲಿ ಅರಿವು ಮೂಡಿಸಿ, ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments