ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್ಗಳಲ್ಲಿ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 100 ಕೋಟಿ ದಾಟಿದೆ.ಕಳೆದ ಜೂ.11ರಂದು ಜಾರಿಗೆ ಬಂದ ಶಕ್ತಿ ಯೋಜನೆ ಅಡಿಯಲ್ಲಿ ನ.22ರವರೆಗೆ 100.47 ಕೋಟಿ ಮಹಿಳಾ ಪ್ರಯಾಣಿಕರು ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಪ್ರಯಾಣಿಸಿದ್ದಾರೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಬಸ್ಗಳಲ್ಲಿ ಪ್ರತಿದಿನ ಸರಾಸರಿ 60ರಿಂದ 65 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ.ಅಂತಾ ಅಧಿಕಾರಿಗಳು ಹೇಳಿದ್ದಾರೆ.