ನುಡಿದಂತೆ ನಡೆವ ಪಕ್ಷ ಕಾಂಗ್ರೆಸ್ : ಜಮೀರ್

Webdunia
ಗುರುವಾರ, 31 ಆಗಸ್ಟ್ 2023 (09:02 IST)
ಬೆಂಗಳೂರು : ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದು ಜನರ ಬಳಿ ಮತ ಕೇಳುತ್ತದೆ. ಬಿಜೆಪಿ ದ್ವೇಷದ ಭಾವನೆ ಮೂಡಿಸಿ ಮತ ಕೇಳುತ್ತದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.

ಚಾಮರಾಜಪೇಟೆ ಕಸ್ತೂರಿ ನಗರದ ಬಿಬಿಎಂಪಿ ಜೂನಿಯರ್ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ್ದು ಅಭಿವೃದ್ಧಿ ಮಂತ್ರ, ಬಿಜೆಪಿ ಅವರದು ದ್ವೇಷದ ತಂತ್ರ ಎಂದು ಹೇಳಿದರು. 

ಕಾಂಗ್ರೆಸ್ ಪಕ್ಷವು ಚುನಾವಣೆ ಸಮಯದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಪೈಕಿ ನಾಲ್ಕು ಈಡೇರಿಸಿದೆ. ಇಂದು ಗೃಹಲಕ್ಷ್ಮಿ 1.28 ಕೋಟಿ ಮನೆ ಯಜಮಾನಿಯರ ಖಾತೆಗೆ ತಲಾ ಎರಡು ಸಾವಿರ ಜಮೆ ಆಗಿದೆ. ಇಷ್ಟು ಕುಟುಂಬಗಳು ನೆಮ್ಮದಿಯ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.

ರಾಹುಲ್ ಗಾಂಧಿ ಮಾರ್ಗದರ್ಶನದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಮ್ಮ ಸರ್ಕಾರ ಮುನ್ನಡೆಯುತ್ತಿದೆ. ಗೃಹಜ್ಯೋತಿಯಡಿ 1.42 ಕೋಟಿ ಕುಟುಂಬಗಳಿಗೆ ಅನುಕೂಲ ಆಗಿದೆ. ಶಕ್ತಿ ಯೋಜನೆಯಡಿ 48 ಕೋಟಿ ಮಹಿಳೆಯರು 1,000 ಕೋಟಿ ರೂ. ಮೊತ್ತದಷ್ಟು ಉಚಿತ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ 1.20 ಕೋಟಿ ಕುಟುಂಬಕ್ಕೆ ಐದು ಕೆಜಿ ಅಕ್ಕಿ ಮೊತ್ತ ಜಮೆ ಮಾಡಿದ್ದೇವೆ. ಮತ್ತೊಂದು ಗ್ಯಾರಂಟಿ ಶೀಘ್ರವೇ ಜಾರಿ ಮಾಡುತ್ತೇವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments