ಬೆಂಗಳೂರು : ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪಕ್ಷ ಮುಂದುವರಿಯುತ್ತಿದೆ. ಅಲ್ಲದೆ ಅವರ ನೇತೃತ್ವದಲ್ಲಿ ಪಕ್ಷ ಇನ್ನಷ್ಟು ಬಲಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯಾಧ್ಯಕ್ಷರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಳಿನ್ ಕುಮಾರ್ ಕಟೀಲ್ಗೆ ಅಭಿನಂದನೆ ಸಲ್ಲಿಸಿದರು. ಕಟೀಲ್ ಅವರು ಪಕ್ಷವನ್ನು ಸಮರ್ಥವಾಗಿ ಕಟ್ಟಿದ್ದಾರೆ. ಹಲವು ಸಲ ರಾಜ್ಯ ಪ್ರವಾಸ ಮಾಡಿದ್ದಾರೆ. ಬೂತ್ ಮಟ್ಟದಿಂದ ಪಕ್ಷ ಸಂಘಟಿಸಿ ಯಶಸ್ವಿಗೊಳಿಸಿದ್ದಾರೆ ಎಂದರು.
ಕಟೀಲ್ ನೇತೃತ್ವದಲ್ಲಿ ಮುಂದುವರೆಯುತ್ತಿದ್ದೇವೆ. ಅವರ ನೇತೃತ್ವದಲ್ಲಿ ಪಕ್ಷ ಇನ್ನಷ್ಟು ಬಲಗೊಳ್ಳಲಿದೆ ಎಂದು ಹೇಳಿದರು. ಇದೇ ವೇಳೆ ರಾಜ್ಯಾಧ್ಯಕ್ಷರ ಬದಲಾವಣೆಯ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಪಕ್ಷದಲ್ಲಿ ಬದಲಾವಣೆ ಚರ್ಚೆ ನಡೆಯುತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು.