ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡುವ ರೀತಿಯಲ್ಲಿ ಮೊಬೈಲ್ ಸ್ಟೇಟಸ್ ಹಾಕಿಕೊಂಡಿದ್ದ ಜಿಲ್ಲೆಯ ಆಳಂದ ತಾಲ್ಲೂಕಿನ ಸುಂಟನೂರ ಗ್ರಾಮ ಪಂಚಾಯಿತಿ ಪಿಡಿಒ ಪ್ರವೀಣಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಆಗಸ್ಟ್ 21ರಂದು ಆರೋಪಿ ಪ್ರವೀಣಕುಮಾರ್ ತಮ್ಮ ಮೊಬೈಲ್ ನಲ್ಲಿ ಸಿದ್ರಾಮುಲ್ಲಾಖಾನ್ ಎಂಬ ಬರಹದ ಜೊತೆಗೆ ಸಿದ್ದರಾಮಯ್ಯ ಅವರ ತಲೆಗೆ ಮುಸ್ಲಿಮರು ಧರಿಸುವ ಟೊಪ್ಪಿಗೆ ಹಾಕಿರುವಂತೆ ಎಡಿಟ್ ಮಾಡಲಾದ ಚಿತ್ರವನ್ನು ಸ್ಟೇಟಸ್ ಹಾಕಿಕೊಂಡಿದ್ದರು.
ಈ ಸಂಬಂಧ ಪೊಲೀಸರಿಗೆ ಸುಂಟನೂರ ಗ್ರಾಮದ ಮುಖಂಡ ಮಲ್ಲಿಕಾರ್ಜುನ ಡಣ್ಣೂರ ದೂರನ್ನು ನೀಡಿದ್ದರು.
ಗ್ರಾಮದ ಮುಖಂಡ ಮಹಾಲಿಂಗಪ್ಪ ಹರವಾಳ, ಆಳಂದ ತಾಲ್ಲೂಕು ಕುರುಬರ ಸಂಘದ ಯುವ ಘಟಕದ ಅಧ್ಯಕ್ಷ ಬೀರಣ್ಣಾ ಪೂಜಾರಿ ಅವರು ಪಿಡಿಒ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಪಂಚಾಯಿತಿ ಅಧಿಕಾರಿಗಳಿಗೆ ದೂರು ನೀಡಿದ್ದರು.
ದೂರು ಆಧರಿಸಿ ನಿಂಬರ್ಗಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.