ಚಕ್ರವರ್ತಿ ಸೂಲಿಬೆಲೆಯ ಪರ ಬ್ಯಾಟ್ ಬೀಸಿದ ಪೇಜಾವರ ಶ್ರೀಗಳು

Webdunia
ಶುಕ್ರವಾರ, 4 ಅಕ್ಟೋಬರ್ 2019 (11:26 IST)
ಬಾಗಲಕೋಟೆ : ಕೇಂದ್ರ ಸಚಿವ ಸದಾನಂದ ಗೌಡ ಹೇಳಿಕೆ ಕೊಟ್ಟ ತಕ್ಷಣ ಸೂಲಿಬೆಲೆ ದೇಶದ್ರೋಹಿ ಆಗಲು ಸಾಧ್ಯವಿಲ್ಲ ಎಂದು ಪೇಜಾವರ ಶ್ರೀಗಳು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಯ ಪರ ಬ್ಯಾಟ್ ಬೀಸಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂಲಿಬೆಲೆ ಒಳ್ಳೆ ಕೆಲಸ ಮಾಡುತ್ತಿದ್ದಾರೆ. ಯುವಕರನ್ನು ಸೇರಿಸಿ ಉತ್ತಮ ಸಂಘಟನೆ ಮಾಡುತ್ತಿದ್ದಾರೆ. ಸದಾನಂದಗೌಡರು ಕೂಡ ಕೇಂದ್ರ ಮಂತ್ರಿಯಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸದಾನಂದಗೌಡರು ವೈಯಕ್ತಿಕವಾಗಿ ಹೆಸರು ಹೇಳಿ ಹಾಗೆ ಮಾತಾಡಿಲ್ಲ. ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಆದರೆ ಹೇಳಿಕೆ ಕೊಟ್ಟ ತಕ್ಷಣ ದೇಶದ್ರೋಹಿ ಆಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.


ರಾಜ್ಯದ ನೆರೆ ಸಂತ್ರಸ್ತರಿಗೆ ಕೇಂದ್ರದಿಂದ  ಪರಿಹಾರ ಸಿಗದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಶ್ರೀಗಳು, ಯಾಕೆ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ತಿಳಿದಿಲ್ಲ. ಕರ್ನಾಟಕದಲ್ಲಿ ಮಾತ್ರ ಅಲ್ಲ ಮಹಾರಾಷ್ಟ್ರ, ಗುಜರಾತ್, ಬಿಹಾರ ರಾಜ್ಯಗಳಿಗೂ ಪರಿಹಾರ ಕೊಟ್ಟಿಲ್ಲ. ಬಿಹಾರದಲ್ಲಿ ಕೇವಲ ವೀಕ್ಷಣೆ ಮಾಡಿದ್ದಾರೆ. ಎಲ್ಲಿಯೂ ಹಣ ಬಿಡುಗಡೆಯ ಘೋಷಣೆ ಮಾಡಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments