ನಗರದಲ್ಲಿರುವ ಕನ್ನಡ ಶಾಲೆಯ ಬೀಗ ಒಡೆದು ಶಾಲೆಯಲ್ಲಿದ್ದ ದಾಖಲೆಗಳಿಗೆ ಬೆಂಕಿ ಹಚ್ಚಿ ಡೆಸ್ಕ್ ಮತ್ತಿತರ ಪಿಠೋಪಕರಣಗಳನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ ಹೇಯ ಘಟನೆ ವರದಿಯಾಗಿದೆ.
ಪೊಲೀಸ್ ಠಾಣೆಯ ಕಂಪೌಂಡ್ ಹತ್ತಿರವಿರುವ ಕನ್ನಡ ಶಾಲೆಯ ಮೇಲೆ ಹತ್ತಾರು ಬಾರಿ ದುಷ್ಕರ್ಮಿಗಳು ದಾಳಿ ಮಾಡಿ ದಾಖಲೆಗಳನ್ನು ಸುಟ್ಟು ಹಾಕಿದ್ದಾರೆ. ಹಲವಾರು ಬಾರಿ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳ ಪೋಷಕರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಎರಡು ದಿನಗಳ ಕಾಲ ಶಾಲೆಗೆ ರಜೆಯಿರುವುದನ್ನು ಕಂಡ ದುಷ್ಕರ್ಮಿಗಳು, ಶಾಲೆಯ ಬಾಗಿಲ ಬೀಗ ಒಡೆದು ಶಾಲೆಯಲ್ಲಿದ್ದ ಎಲ್ಲಾ ದಾಖಲೆಗಳನ್ನು ಸುಟ್ಟುಹಾಕಿ ಶಾಲೆಗೆ ಬೆಂಕಿ ಹಚ್ಚಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ದುಷ್ಕರ್ಮಿಗಳು ವಿರುದ್ಧ ಶೀಘ್ರಧಲ್ಲಿಯೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅದಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಶಾಲೆಯ ಶಿಕ್ಷಕರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ