Publish Date: Fri, 11 Nov 2016 (14:17 IST)
Updated Date: Fri, 11 Nov 2016 (15:00 IST)
ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರನ್ನು ದುಷ್ಕರ್ಮಿಗಳು ಅಪಹರಿಸುವ ಯತ್ನ ಮಾಡಿದ್ದರೂ ವಿದ್ಯಾರ್ಥಿನಿಯರು ಪಾರಾಗುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಿಲ್ಲೆಯ ಎಲೆಚಾಕನಹಳ್ಳಿಯ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಶಾಲೆಗೆ ತೆರಳುತ್ತಿರುವ ಸಂದರ್ಭದಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳು ವಿದ್ಯಾರ್ಥಿನಿಯರನ್ನು ಅಪಹರಿಸಲು ಪ್ರಯತ್ನಿಸಿದ್ದಾರೆ. ಆದರೆ, ಅಪಹರಣಕಾರರಿಂದ ತಪ್ಪಿಸಿಕೊಂಡಿದ್ದಾರೆ.
ರಾಗಿ ಮುದ್ದನಹಳ್ಳಿ ಗ್ರಾಮದ ನಿವಾಸಿಗಳಾದ 7ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಅಂಕಿತ ಮತ್ತು ಮಾನಸ ಎನ್ನುವ ವಿದ್ಯಾರ್ಥಿನಿಯರೇ ಅಪಹರಣಕಾರರಿಂದ ತಪ್ಪಿಸಿಕೊಂಡ ವಿದ್ಯಾರ್ಥಿನಿಯರಾಗಿದ್ದಾರೆ.
ವಿದ್ಯಾರ್ಥಿನಿಯರ ಪೋಷಕರು ಕಿಡ್ನಾಪರ್ಸ್ ಕೃತ್ಯದ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ