Select Your Language

Notifications

webdunia
webdunia
webdunia
webdunia

ಗಾಂಜಾ ಸಾಗಾಟ ತನಿಖೆಯಲ್ಲಿ ಪೊಲೀಸರಿಗೆ ಸಿಕ್ತು ಟ್ವಿಸ್ಟ್!

ಗಾಂಜಾ ಸಾಗಾಟ ತನಿಖೆಯಲ್ಲಿ ಪೊಲೀಸರಿಗೆ ಸಿಕ್ತು ಟ್ವಿಸ್ಟ್!
ಶಿವಮೊಗ್ಗ , ಸೋಮವಾರ, 25 ಜುಲೈ 2022 (10:22 IST)
ಶಿವಮೊಗ್ಗ : ಖಾಸಗಿ ಬಸ್ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಿದಾಗ ಕೊಲೆ ರಹಸ್ಯ ಬಯಲಾಗಿದೆ ಎಂದು ಶಿವಮೊಗ್ಗ ಪೊಲೀಸರು ತಿಳಿಸಿದ್ದಾರೆ.
 
ಖಚಿತ ಮಾಹಿತಿ ಮೇರೆಗೆ ತೀರ್ಥಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಖಾಸಗಿ ಬಸ್ನಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಈ ವೇಳೆ 2 ಕೆಜಿ 300 ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಂಡಿದ್ದು, ಕೇರಳ ಮೂಲದ ಅಜೀಲ್ನನ್ನು ಬಂಧಿಸಿದ್ದಾರೆ.

ಪೊಲೀಸರು ಬಂಧಿತ ಆರೋಪಿಯನ್ನು ವಿಚಾರಣೆ ನಡೆಸಿದ ಹಿನ್ನೆಲೆ ಫುಲ್ ಶಾಕ್ ಆಗಿದ್ದಾರೆ. ಗಾಂಜಾ ಸಾಗಾಟದ ಕಿಂಗ್ ಪಿನ್ ವಿಲ್ಸನ್ನ್ನು ಬಂಧಿಸಿದ ಪೊಲೀಸರು ಬೆಂಗಳೂರು ಮೂಲದ ಮತ್ತೊಬ್ಬ ಆರೋಪಿ ಅಲೆಕ್ಸ್ನನ್ನು ಬಂಧಿಸಿದ್ದಾರೆ.

ಗೃಹ ಸಚಿವರ ತವರು ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೇ ಗಾಂಜಾ ಪ್ರಕರಣದಲ್ಲಿ ಭಾಗಿಯಾಗಿರುವುದು ವಿಚಾರಣೆ ವೇಳೆ ಪತ್ತೆಯಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ವ್ಯಾಪಾರಿಗಳ ಮೇಲೆ ದಂಡ ವಿಧಿಸಲು ಮುಂದಾದ ಬಿಬಿಎಂಪಿ!