Publish Date: Thu, 03 Feb 2022 (14:41 IST)
Updated Date: Thu, 03 Feb 2022 (15:44 IST)
ಬೆಂಗಳೂರು : ಕರ್ನಾಟಕ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆಯ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನಾಕಾಂಕ್ಷಿಗಳು ಪ್ರಯತ್ನ ಚುರುಕುಗೊಳಿಸಿದ್ದಾರೆ.
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಕೆಲವು ಶಾಸಕರು ತಮ್ಮ ಆಕಾಂಕ್ಷೆಯನ್ನು ತೆರೆದಿಟ್ಟರು.
ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ದೆಹಲಿಗೆ ತೆರಳುವುದಾಗಿ ರೇಣುಕಾಚಾರ್ಯ ಹೇಳಿರುವ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಹಲವು ಆಕಾಂಕ್ಷಿ ಶಾಸಕರು ಭೇಟಿ ನೀಡಿ ಮಾತುಕತೆ ನಡೆಸಿದರು.