Select Your Language

Notifications

webdunia
webdunia
webdunia
webdunia

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ ಹುದ್ದೆ

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ ಹುದ್ದೆ
bangalore , ಮಂಗಳವಾರ, 28 ಸೆಪ್ಟಂಬರ್ 2021 (21:45 IST)
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ (ಸಿವಿಲ್ ಪುರುಷ ಮತ್ತು ಮಹಿಳೆ) ಸೇವಾನಿರತರನ್ನೊಳಗೊಂಡ 545 ಹುದ್ದೆಗಳಿಗೆ ದೈಹಿಕ ಅರ್ಹತಾ ಪರೀಕ್ಷೆಗಳಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಅ. 3 ರಂದು ಲಿಖಿತ ಪರೀಕ್ಷೆ ನಡೆಯಲಿದೆ.
ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಕಲಬುರಗಿ ನಗರ, ದಾವಣಗೆರೆ ಹಾಗೂ ತುಮಕೂರು ಜಿಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು ಎಂದು ರಾಜ್ಯ ಪೊಲೀಸ್ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಿದೆ.
ಮೊದಲ ಪ್ರಶ್ನೆ ಪತ್ರಿಕೆ ಬೆಳಗ್ಗೆ 11 ರಿಂದ 12:30 ಗಂಟೆಯವರೆಗೆ ಮತ್ತು ಎರಡನೇ ಪತ್ರಿಕೆ ಮಧ್ಯಾಹ್ನ 3 ರಿಂದ 4:30 ರವರೆಗೆ ಇರಲಿದೆ. ಅಭ್ಯರ್ಥಿಗಳು ಪರೀಕ್ಷೆಯ ಕರೆ ಪತ್ರವನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ www.recruitment.ksp.gov.in ನಿಂದ ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೈ ಕೋಟ್೯ ತೀಪು ಸಾಗತಾರ್ಹ: ಭಜರಂಗದಳ