ಪತ್ರಿಕಾ ರಂಗಕ್ಕೆ ಗೌರವವಿದೆ, ಟೀಕಿಸುವುದು ಸರಿಯಲ್ಲ: ಆರ್.ವಿ.ದೇಶಪಾಂಡೆ

Webdunia
ಮಂಗಳವಾರ, 12 ಸೆಪ್ಟಂಬರ್ 2017 (12:49 IST)
ಮಾಧ್ಯಮಗಳ ವಿರುದ್ಧ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಚಿವ ಆರ್. ವಿ.ದೇಶಪಾಂಡೆ, ಪತ್ರಿಕಾ ರಂಗಕ್ಕೆ ತನ್ನದೇ ಆದ ಗೌರವವಿದೆ. ಅದನ್ನು ಟೀಕಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ರಿಕಾರಂಗದವರ ವಿರುದ್ಧ ಟೀಕಿಸುವುದು ಖಂಡನೀಯ. ಜನಪ್ರತಿನಿಧಿಗಳ ಭಾಷಣಕ್ಕೆ ಗೌರವ ಸಿಗಬೇಕೆಂದರೆ ಮಾಧ್ಯಮಗಳ ಪಾತ್ರ ಬಹುಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.
 
ಪ್ರಜಾಪ್ರಭುತ್ವದಲ್ಲಿ ಕೇಂದ್ರ ಸಚಿವರಾಗಿ ಮಾಧ್ಯಮಗಳ ಅಗೌರವ ತೋರುವುದು, ಮನಬಂದಂತೆ ಹೇಳಿಕೆ ನೀಡುವುದು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ. ಇನ್ಮುಂದಾದರೂ ಇಂತಹ ಹೇಳಿಕೆಗಳನ್ನು ನೀಡುವುದು ನಿಲ್ಲಿಸುವುದು ಸೂಕ್ತ ಎಂದರು.
 
ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಪತ್ರಕರ್ತರು ಎಡಬಿಡಂಗಿಗಳು ಎಂದು ಜರಿದು ಮಾಧ್ಯಮಗಳ ಆಕ್ರೋಶಕ್ಕೆ ಕಾರಣವಾಗಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments