ಆಟೋ ರಿಕ್ಷಾಗಳಿಗೆ ಬಳಸುವ ಎಲ್ ಪಿ ಜಿ ಬೆಲೆ ಕಳೆದ ಒಂದು ವರ್ಷದಲ್ಲಿ ಎರಡುಪಟ್ಟು ಏರಿಕೆ
bangalore , ಗುರುವಾರ, 11 ನವೆಂಬರ್ 2021 (20:32 IST)
ಬೆಂಗಳೂರು: ಆಟೋ ರಿಕ್ಷಾಗಳಿಗೆ ಬಳಸುವ ಎಲ್‍ಪಿಜಿ ಬೆಲೆಯು ಕಳೆದ ಒಂದು ವರ್ಷದಲ್ಲಿ ಸುಮಾರು ಎರಡು ಪಟ್ಟು ಏರಿಕೆ ಆಗಿರುವುದನ್ನು ಖಂಡಿಸಿ ಆಮ್ ಆದ್ಮಿ ಪಾರ್ಟಿಯ ಆಟೋ ಚಾಲಕರ ಘಟಕವು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ಆಟೋ ಘಟಕದ ರಾಜ್ಯಾಧ್ಯಕ್ಷ ಅಯೂಬ್ ಖಾನ್, ಪದೇ-ಪದೇ ಎಲ್‍ಪಿಜಿ ಬೆಲೆ ಏರಿಕೆ ಮಾಡುವ ಕೇಂದ್ರ ಸರ್ಕಾರವು ಆಟೋ ಚಾಲಕರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ಕಳೆದ ವರ್ಷ ಇದೇ ಸಮಯದಲ್ಲಿ 38 ರೂಪಾಯಿಯಿದ್ದ ಎಲ್‍ಪಿಜಿ ಬೆಲೆ ಈಗ 66 ರೂ. ತಲುಪಿದೆ. ಅಂದರೆ, ಕೇವಲ ಒಂದು ವರ್ಷದಲ್ಲಿ 28 ರೂ. ಏರಿಕೆಯಾಗಿದೆ.
ಕಳೆದ ವಾರ ಒಂದೇ ಸಲ 6 ರೂಪಾಯಿ ಹೆಚ್ಚಿಸಲಾಗಿದೆ. ಪ್ರಯಾಣಿಕರು ನೀಡುವ ಹಣವು ಎಲ್‍ಪಿಜಿಗೇ ಖರ್ಚಾಗುತ್ತಿದ್ದು, ಆದಾಯವಿಲ್ಲದೇ ಚಾಲಕರ ಬದುಕು ದುಸ್ತರವಾಗಿದೆ. ಆಟೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಇಂಧನ ಬೆಲೆ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮುಂದಿನ ಸುದ್ದಿ