ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪಾದ್ರಿಗಳು

Webdunia
ಮಂಗಳವಾರ, 5 ಫೆಬ್ರವರಿ 2019 (09:38 IST)
ಮೈಸೂರು : ಮೂವರು ಪಾದ್ರಿಗಳು  ಅಪ್ರಾಪ್ತ ಬಾಲಕಿಯೊಬ್ಬಳಿಗೆ ಸರ್ಕಾರಿ ಕೆಲಸ ಕೊಡಿಸುವ ಆಮಿಷವೊಡ್ಡಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಮಂಗಳೂರಿನಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.

ಮೂವರು ಪಾದ್ರಿಗಳು ಬಾಲಕಿಯೊಬ್ಬಳ ತಾಯಿಗೆ ಮನೆ ಕಟ್ಟಲು 1 ಲಕ್ಷ ಕೊಡುವುದಾಗಿ ಆಮಿಷವೊಡ್ಡಿ, ಹಾಗೇ ಬಾಲಕಿಗೆ ಕೆಲಸ ಕೊಡಿಸುವುದಾಗಿ ಆಕೆಯ ಪೋಷಕರನ್ನು ನಂಬಿಸಿ ಬಾಲಕಿಯನ್ನು ಮಂಗಳೂರಿಗೆ ಕರೆದುಕೊಂಡು ಹೋಗಿ  ಮೂವರು ಸೇರಿ ಅತ್ಯಾಚಾರ ಎಸಗಿದ್ದಾರೆ.

 

ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಬಂದ ಬಾಲಕಿ ಪೋಷಕರಿಗೆ ಈ ವಿಚಾರ ತಿಳಿಸಿದ್ದಾಳೆ. ಬಳಿಕ ಪೋಷಕರು ಸ್ವಸಹಾಯ ಸಂಘದ ನೆರವಿನಿಂದ ಬೆಂಗಳೂರಿನ ಹೈಕೋರ್ಟ್‍ಗೆ ದೂರು ಸಲ್ಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮೈಸೂರು ಕಮೀಷನರ್ ಗೆ ಹೈಕೋರ್ಟ್ ಸೂಚನೆ ನೀಡಿದೆ.

 

ಸದ್ಯ ಆರೋಪಿಗಳ ಮೇಲೆ ಪೋಸ್ಕೋ ಕಾಯ್ದೆ ಅಡಿಯಲ್ಲಿ ಎಫ್.ಐ.ಆರ್ ದಾಖಲಿಸಿಕೊಂಡ ಮೈಸೂರಿನ ಎನ್.ಆರ್ ಪೊಲೀಸ್ ಠಾಣಾ ಅಧಿಕಾರಿಗಳು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಣಂತಿ ಹೆಂಡ್ತಿ ಆರೈಕೆಗೆ ಹಣವಿಲ್ಲ, ಮಗುವನ್ನೇ ಮಾರಾಟ ಮಾಡಿದ ತಂದೆ, ಮುಂದೇನಾಯ್ತು ಗೊತ್ತಾ

11ವರ್ಷದ ಬಾಲಕಿ ಮೇಲೆ ವಿವಾಹಿತನಿಂದ ರೇಪ್‌: ಅವಧಿಪೂರ್ವ ಮಗು ಜನನ, ಕ್ಷಣದಲ್ಲೇ ಸಾವು

ಬರ್ತಡೇ ಪಾರ್ಟಿಗೆಂದು ಕರೆಸಿ ಯುವತಿ ಮೇಲೆ ಗ್ಯಾಂಗ್ ರೇಪ್ ಮಾಡಿದ ಸ್ನೇಹಿತರು

ಪ್ರವಾಹ ಸಂತ್ರಸ್ತರ ಭೇಟಿಗೆ ಸೆ.9ರಂದು ಗುರುದಾಸ್‌ಪುರಕ್ಕೆ ಮೋದಿ

ಜಪಾನ್‌ನಲ್ಲಿ ರಾಜಕೀಯ ಅಸ್ಥಿರತೆ: ಪ್ರಧಾನಿ ಶಿಗೇರು ಇಶಿಬಾ ದಿಢೀರ್‌ ರಾಜೀನಾಮೆ

ಮುಂದಿನ ಸುದ್ದಿ
Show comments