Webdunia - Bharat's app for daily news and videos

Install App

ಪಿಎಫ್‌ಐ ನಿಷೇಧದ ಪ್ರಸ್ತಾಪ ಸರ್ಕಾರದ ಮುಂದಿಲ್ಲ– ರಾಮಲಿಂಗಾರೆಡ್ಡಿ

Webdunia
ಶುಕ್ರವಾರ, 5 ಜನವರಿ 2018 (14:49 IST)
ಪಿಎಫ್‍ಐ ಸಂಘಟನೆ ಸೇರಿದಂತೆ ಯಾವುದೇ ಸಂಘಟನೆಗಳನ್ನು ನಿಷೇಧ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
 
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಯಾವುದೇ ಸಂಘಟನೆಗಳನ್ನು ನಿಷೇಧಿಸುವ ಪ್ರಸ್ತಾಪ ಸದ್ಯಕ್ಕೆ ಸರ್ಕಾರದ ಮುಂದಿಲ್ಲ. ಮುಖ್ಯಮಂತ್ರಿಗಳು ಪ್ರವಾಸದಿಂದ ಮರಳಿದ ಮೇಲೆ ಈ ಸಂಬಂಧ ಚರ್ಚೆ ನಡೆಲಾಗುತ್ತದೆ ಎಂದು ತಿಳಿಸಿದ್ದಾರೆ.
 
ಬಿಜೆಪಿಯವರು ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ. ಪಿಎಫ್‍ಐ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ನಾವು ಯಾವ ಸಂಘಟನೆಯೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದಿದ್ದಾರೆ.
 
ಕರಾವಳಿ ಘಟನೆಗೆ ಬಿಜೆಪಿ ಮತ್ತು ಕೆಲ ಸಂಘಟನೆಗಳು ಕಾರಣವಾಗಿದ್ದು, ಚುನಾವಣೆಗೋಸ್ಕರ ಈ ರೀತಿ ಮಾಡಲಾಗಿದೆ. ರಾಜ್ಯದ ಪರಿಸ್ಥಿತಿ ಹದಗೆಡಲು ನಾವು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments