Select Your Language

Notifications

webdunia
webdunia
webdunia
webdunia

ಪ್ರತಿಭಟನಾಕಾರರಿಂದ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಯತ್ನ: ಬಂಧನ

ಪ್ರತಿಭಟನಾಕಾರರಿಂದ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಯತ್ನ: ಬಂಧನ
ಬೆಂಗಳೂರು , ಬುಧವಾರ, 7 ಸೆಪ್ಟಂಬರ್ 2016 (13:19 IST)
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ವಿರೋಧಿಸಿರುವ ಕನ್ನಡ ಪರ ಸಂಘಟನೆಗಳು ಇಂದು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ.
 
ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಪ್ರತಿಭಟನೆಯಲ್ಲಿ ತೊಡಗಿರುವ ಸಂಘಟನೆಗಳ ಹೋರಾಟಗಾರರು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ತೀವ್ರ ಸ್ವರೂಪಕ್ಕೆ ಹೋಗುವ ಮುನ್ನವೇ ಹಿರಿಯ ಪೊಲೀಸ್ ಅಧಿಕಾರಿಗಳು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.
 
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಜೀವಂತವಿರುವ ಮುಖಂಡರ ಹೆಸರಿನಲ್ಲಿ ಅತ್ಯಧಿಕ ಯೋಜನೆಗಳಿಗೆ ವಾಜಪೇಯಿ ನಿದರ್ಶನ