Publish Date: Thu, 13 Jan 2022 (14:51 IST)
Updated Date: Thu, 13 Jan 2022 (19:52 IST)
ಬೆಂಗಳೂರು : ಕಾಂಗ್ರೆಸ್ ಪಾದಯಾತ್ರೆ ಸ್ಥಗಿತಗೊಳಿಸಲು ನಿರಂತರ ಪ್ರಯತ್ನವನ್ನು ಸರ್ಕಾರ ಮಾಡಿದೆ.
ಯಾವುದೇ ಲಾಠಿ ಚಾರ್ಜ್, ಬಂಧನಕ್ಕೆ ಅವಕಾಶ ನೀಡದೆ ಸರ್ಕಾರ ಸಮಚಿತ್ತದಿಂದ ಪರಿಸ್ಥಿತಿ ನಿಭಾಯಿಸಿದೆ.
ಕೋವಿಡ್ ಪ್ರಕರಣ ಹೆಚ್ಚಲು ಪಾದಯಾತ್ರೆ ನಡೆಸಿದವರು ಕೂಡ ಕಾರಣರು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹರಿಹಾಯ್ದರು.
ಅನೇಕ ಅಮಾಯಕರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು, ಎಷ್ಟು ಮಂದಿಗೆ ಸೋಂಕು ಬಂದಿದೆ ಎಂದು ಗೊತ್ತಿಲ್ಲ. ಈ ಸಮಯದಲ್ಲಿ ಪ್ರತಿಭಟನೆ ಬೇಡ ಎಂದು ಕೋರಲಾಗಿತ್ತು. ಡಿ.ಕೆ.ಶಿವಕುಮಾರ್ ಅವರು ಕೋವಿಡ್ ನಿರ್ವಹಣೆ ಬಗ್ಗೆ ಅನುಮಾನ ವ್ಯಕ್ತಪಡಿಸುವುದು ಅಧಿಕಾರಿಗಳ ಸ್ಫೂರ್ತಿ ಕಳೆಯುವ ಕೆಲಸ ಅಸಮಾಧಾನ ವ್ಯಕ್ತಪಡಿಸಿದರು.