Select Your Language

Notifications

webdunia
webdunia
webdunia
webdunia

ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಿಸಿದ ಪೇದೆ

ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಿಸಿದ ಪೇದೆ
bangalore , ಶುಕ್ರವಾರ, 10 ಜೂನ್ 2022 (20:43 IST)
ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಸಂಚಾರಿ ಪೊಲೀಸ್ ಪೇದೆಯೊಬ್ಬರು ರಕ್ಷಣೆ ಮಾಡಿದ ಘಟನೆ ಗದಗ ನಗರದಲ್ಲಿ ನಡೆದಿದೆ.
ಮುಬಾರಕ್ ಎನ್ನುವ ಯುವಕ ಆತ್ಮಹತ್ಯೆಗೆ ಯತ್ನಿಸಿದ. ನಗರದ ಐತಿಹಾಸಿಕ ಭೀಷ್ಮಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ವೇಳೆ ಸಮಯ ಪ್ರಜ್ಞೆ ಮೆರೆದ ಟ್ರಾಫಿಕ್ ಪೊಲೀಸ್ ಪೇದೆ ಮತ್ತು ಸ್ಥಳೀಯರು ಯುವಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ರಂಗನವಾಡಿ ಓಣಿಯ ಮುಬಾರಕ್, ನೋಡು ನೋಡುತ್ತಿದ್ದಂತೆ ಕೆರೆಗೆ ಹಾರಿದ್ದಾನೆ. ಈ ವೇಳೆ ಯುವಕನನ್ನು ನೋಡಿ ಬೆಚ್ಚಿಬಿದ್ದಿದ್ದ ಪೇದೆ ತಕ್ಷಣ ಕಾರ್ಯಪ್ರವೃತ್ತರಾಗಿ ಸ್ಥಳೀಯ ಯುವಕನ ಸಹಾಯದಿಂದ ಯುವನನ್ನು ರಕ್ಷಿಸಿ ಮಾನವೀಯತೆಯ ಮೆರೆದಿದ್ದಾರೆ.
ಸಂಚಾರಿ ಠಾಣೆಯ ಪೇದೆ ಗಂಗಾಧರ ಪೂಜಾರ, ಮತ್ತು ಸ್ಥಳೀಯ ಮಹೇಶ ವಡ್ಡರರ ರಕ್ಷಣೆ ಕಾರ್ಯ ಕೈಗೊಂಡರು. ಇವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಗೆ ಗೆಲುವಿಗೆ ಕಾಂಗ್ರೆಸ್ ನೇರ ಕಾರಣ: ಹೆಚ್.ಡಿ.ಕುಮಾರಸ್ವಾಮಿ ಆರೋಪ