Select Your Language

Notifications

webdunia
webdunia
webdunia
webdunia

ರೆಸಾರ್ಟ್ ರಾಜಕೀಯ ಮಾಡುವವರ ಮುಖಕ್ಕೆ ಸಗಣಿ ಎರಚುತ್ತೇವೆ - ರೈತ ಸಂಘಟನೆಗಳಿಂದ ಎಚ್ಚರಿಕೆ

ರೆಸಾರ್ಟ್ ರಾಜಕೀಯ ಮಾಡುವವರ ಮುಖಕ್ಕೆ ಸಗಣಿ ಎರಚುತ್ತೇವೆ - ರೈತ ಸಂಘಟನೆಗಳಿಂದ ಎಚ್ಚರಿಕೆ
ರಾಯಚೂರು , ಗುರುವಾರ, 24 ಜನವರಿ 2019 (14:28 IST)
ರಾಯಚೂರು : ಈಗಲ್ ಟನ್ ರೆಸಾರ್ಟ್ ನಲ್ಲಿ  ಶಾಸಕ ಆನಂದ್ ಸಿಂಗ್ ಮೇಲೆ ಶಾಸಕ ಗಣೇಶ್ ಹಲ್ಲೆ ಮಾಡಿದ ಹಿನ್ನಲೆಯಲ್ಲಿ ಇನ್ನು ಮುಂದೆ ರೆಸಾರ್ಟ್ ರಾಜಕೀಯ ಮಾಡುವವರ ಮುಖಕ್ಕೆ ಸಗಣಿ ಎರಚುವುದಾಗಿ  ರೈತ ಸಂಘಟನೆಗಳು ಎಚ್ಚರಿಕೆ ನೀಡಿವೆ.


ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು,’ ಶಾಸಕರ ನಡುವೆ ನಡೆದ ಗಲಾಟೆಯಿಂದ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮಾನ ಹರಾಜಾಗಿದೆ. ಆದರೆ ರಾಜಕೀಯ ಪಕ್ಷಗಳಿಗೆ ಇಂತಹ ಅಪಮಾನ ಯಾವುದೇ ಆಗುವುದಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.


ಅಲ್ಲದೇ ‘ವಿಧಾನಸೌಧ ಸೇರಿದಂತೆ ಅನೇಕ ಸಭಾಂಗಣಗಳಿದ್ದರೂ, ರೆಸಾರ್ಟಿನಲ್ಲಿ ಏನು ಚರ್ಚೆ ಮಾಡುತ್ತಾರೆ. ಇನ್ನು ಮುಂದೆ ರಾಜಕೀಯಕ್ಕಾಗಿ ರೆಸಾರ್ಟ್ ಸಭೆ ನಡೆಸಿದರೆ ಸಂಘಟನೆಯ ಕಾರ್ಯಕರ್ತರು ನುಗ್ಗಿ ಸಗಣಿ ಬಳಿಯಲಿದ್ದಾರೆ. ಈ ಮೂಲಕ ಇಂತಹ ಸಭೆಗಳಿಗೆ ಇತಿಶ್ರೀ ಹಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನಗರಸಭೆ ಜೆಇ ಪತ್ನಿ ದರ್ಬಾರ್!