Select Your Language

Notifications

webdunia
webdunia
webdunia
webdunia

ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಬೇಕು: ಸಚಿವ ಎಸ್.ಟಿ.ಸೋಮಶೇಖರ್

ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಬೇಕು: ಸಚಿವ ಎಸ್.ಟಿ.ಸೋಮಶೇಖರ್
bangalore , ಭಾನುವಾರ, 14 ನವೆಂಬರ್ 2021 (21:11 IST)
ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಪ್ರಕಟಿಸಿದ್ದಾರೆ.
ಮಕ್ಕಳ ದಿನಾಚರಣೆ ಅಂಗವಾಗಿ ಅವರಿಗೆ ಸಂದೇಶ ನೀಡಲಾಗಿದೆ, ಉತ್ತಮ ಶಿಕ್ಷಣ, ಆರೋಗ್ಯ, ಆಹಾರ ನೀಡುವುದು ಮೊದಲ ಕರ್ತವ್ಯ. ನಿಷ್ಕಲ್ಮಶ, ಮುದ್ದು ಮುದ್ದಾದ ಮಕ್ಕಳೊಂದಿಗೆ ಕಾಲ ಕಳೆಯುವುದರ ಜೊತೆಯಲ್ಲಿ ಅವರಿಗೆ ಉತ್ತಮ ಸಂಸ್ಕಾರ, ದೇಶಭಕ್ತಿ, ನಮ್ಮ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹಾನ್ ನಾಯಕರ ಚರಿತ್ರೆಯನ್ನು ಮನದಟ್ಟು ಮಾಡಿಕೊಡಬೇಕು.
ಮಕ್ಕಳು ಈ ದೇಶದ ಅಡಿಪಾಯ. ನಾವು ಹೇಗೆ ಕಾರ್ಯನಿರ್ವಹಿಸುತ್ತೇವೆ ಎಂಬುದರ ಮೇಲೆ ಈ ದೇಶದ ಭವಿಷ್ಯ ಅಡಗಿದೆ. ಇಂದಿನ ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಓದಿನ ಜೊತೆಗೆ ಅವರಲ್ಲಿನ ಇತರ ಕೌಶಲ್ಯಗಳನ್ನು ಗುರುತಿಸಿ ಬೆಳೆಸುವುದೇ ಮಕ್ಕಳ ದಿನಾಚರಣೆಯ ಮುಖ್ಯ ಉದ್ದೇಶ.
ಮಕ್ಕಳ ದಿನಾಚರಣೆಯ ಈ ಶುಭ ಸಂದರ್ಭದಲ್ಲಿ ಅವರ ಕನಸುಗಳನ್ನು ನನಸು ಮಾಡಬೇಕಾಗಿದೆ. ಕೊರೊನಾದ ಕರಿನೆರಳು ಮಕ್ಕಳ ಮೇಲೆ ಬೀಳದಂತೆ ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕು. ಮತ್ತೊಮ್ಮೆ ಮಕ್ಕಳ ಜಯಂತಿಯ ಶುಭಾಶಯಗಳು ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗುಡ್ ನ್ಯೂಸ್: ಮೆಟ್ರೋ ಸಂಪರ್ಕ ಒದಗಿಸಲು ಬಿಎಂಟಿಸಿಯಿಂದ 643 ವಿದ್ಯುತ್ ಚಾಲಿತ ಬಸ್ ಗಳು