Publish Date: Sat, 18 Jul 2020 (20:44 IST)
Updated Date: Sat, 18 Jul 2020 (20:46 IST)
ರಾಜ್ಯದ ಈ ನದಿಗೆ 4000 ಕ್ಯೂಸೆಕ್ಸ್ ನೀರು ಹರಿದು ಬಂದಿದೆ.
ಕರ್ನಾಟಕ ಮತ್ತು ಮಹಾರಾಷ್ಟ್ರದ ಭೀಮಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಕಲಬುರಗಿ ಜಿಲ್ಲೆಯ ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜಿಗೆ ನೀರಿನ ಒಳ ಹರಿವು ಹೆಚ್ಚಿದೆ.
ಬ್ಯಾರೇಜಿನಿಂದ 4000 ಕ್ಯೂಸೆಕ್ಸ್ ನೀರು ಭೀಮಾ ನದಿಗೆ ಹರಿಸಲಾಗಿದೆ ಎಂದು ಭೀಮಾ ಏತ ನೀರಾವರಿ ಯೋಜನೆಯ ಕಾರ್ಯಪಾಲಕ ಅಭಿಯಂತ ಅಶೋಕ ಆರ್. ಕಲಾಲ್ ತಿಳಿಸಿದ್ದಾರೆ.
ಬ್ಯಾರೇಜಿಗೆ ಒಳಹರಿವಿನ ನೀರಿನ ಪ್ರಮಾಣ 4000 ಕ್ಯೂಸೆಕ್ಸ್ ಇದ್ದು, ಅಷ್ಟೇ ಪ್ರಮಾಣದ ನೀರು ನದಿಗೆ ಹರಿಬಿಡಲಾಗುತ್ತಿದೆ.
ಆದರಿಂದ ನದಿ ದಂಡೆಯಲ್ಲಿರುವ ಸಾರ್ವಜನಿಕರು ನದಿಯ ದಡಕ್ಕೆ ಹೋಗದಂತೆ ಮತ್ತು ಜಾನುವಾರುಗಳನ್ನು ಬಿಡದಂತೆ ಎಚ್ಚರಿಕೆ ವಹಿಸಬೇಕು ಎಂದು ಪ್ರದೇಶದ ರೈತರಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ.
ಸೊನ್ನ ಬ್ಯಾರೇಜ್ ಸಾಮರ್ಥ್ಯ 3.16 ಟಿ.ಎಂ.ಸಿ. ಇದ್ದು, ಶನಿವಾರ ಬೆಳಿಗ್ಗೆ 2.74 ಟಿ.ಎಂ.ಸಿ. ನೀರು ಸಂಗ್ರಹಣಗೊಂಡಿದೆ ಎಂದಿದ್ದಾರೆ.