Select Your Language

Notifications

webdunia
webdunia
webdunia
webdunia

ತಿರುಪತಿ ವೆಂಕಟೇಶ್ವರ ದೇಗುಲದ ಗರ್ಭಗುಡಿ 6-8 ತಿಂಗಳು ಕ್ಲೋಸ್‌ ಆಗುತ್ತಾ..?

ತಿರುಪತಿ ವೆಂಕಟೇಶ್ವರ ದೇಗುಲದ ಗರ್ಭಗುಡಿ 6-8 ತಿಂಗಳು ಕ್ಲೋಸ್‌ ಆಗುತ್ತಾ..?
ತಿರುಮಲ , ಸೋಮವಾರ, 26 ಡಿಸೆಂಬರ್ 2022 (16:28 IST)
ತಿರುಪತಿ ಜಿಲ್ಲೆಯಲ್ಲಿರುವ ತಿರುಮಲ ದೇವಸ್ಥಾನದ ಮುಖ್ಯ ಗರ್ಭಗುಡಿಯನ್ನು 2023 ರಲ್ಲಿ ಆರರಿಂದ ಎಂಟು ತಿಂಗಳವರೆಗೆ ಮುಚ್ಚುವ ಸಾಧ್ಯತೆಯಿದೆ, ಭಾರತದ ಶ್ರೀಮಂತ ದೇವಾಲಯಗಳಲ್ಲಿ ಒಂದನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ತಿರುಪತಿ ತಿಮ್ಮಪ್ಪನ ದೇಗುಲದ ಆನಂದ ನಿಲಯಂನ ಚಿನ್ನದ ಲೇಪನವನ್ನು ಬದಲಾಯಿಸಲು ಯೋಜಿಸಿದೆ.
ಭಕ್ತರು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುವುದು ಹೇಗೆ? ಎಂಬ ಪ್ರಶ್ನೆ ಸಹಜ. ಇದಕ್ಕಾಗಿ, ಮುಖ್ಯ ದೇವಾಲಯದ ಪಕ್ಕದಲ್ಲಿ ತಾತ್ಕಾಲಿಕವಾಗಿ ತಿರುಪತಿ ವೆಂಕಟೇಶ್ವರ ದೇವರ ತದ್ರೂಪಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಭಕ್ತರ ದರ್ಶನಕ್ಕೆ ಅನುವು ಮಾಡಲು ಯೋಜಿಸಲಾಗಿದೆ ಎಂದು ಟಿಟಿಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
 
" ಡಿಸೆಂಬರ್ ಮೊದಲ ವಾರದಲ್ಲಿ ಟ್ರಸ್ಟ್‌ನ ಮಂಡಳಿ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. "ಆಗಮ ಶಾಸ್ತ್ರ" ಸಲಹೆಗಾರರು (ಆಗಮ ಶಾಸ್ತ್ರವು ದೇವಾಲಯದ ನಿರ್ಮಾಣಗಳು ಮತ್ತು ಆಚರಣೆಗಳ ನಡವಳಿಕೆಯ ಬಗ್ಗೆ ವ್ಯವಹರಿಸುವ ಪುರಾತನ ಗ್ರಂಥವಾಗಿದೆ), ಪುರೋಹಿತರು, ಸಿವಿಲ್ ಎಂಜಿನಿಯರ್‌ಗಳು ಮತ್ತು ಇತರ ತಜ್ಞರೊಂದಿಗೆ ಸುದೀರ್ಘ ಚರ್ಚೆ ಮತ್ತು ಸಮಲೋಚನೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆʼʼ ಎಂದು ಟಿಟಿಡಿ ಅಧಿಕಾರಿಗಳು ತಿಳಿಸಿದ್ದಾರೆ.
 
ಇದಕ್ಕೂ ಮುನ್ನ 1958 ರಲ್ಲಿ ಆನಂದ ನಿಲಯಕ್ಕೆ ಚಿನ್ನದ ಲೇಪನ ಮಾಡಲಾಗಿದೆ. ಆ ಸಮಯದಲ್ಲಿ ಚಿನ್ನದ ಲೇಪನ ಮಾಡಲು ಸುಮಾರು ಎಂಟು ವರ್ಷ ಬೇಕಾಗಿತ್ತು. ಕ್ರಿ.ಶ 839 ರಲ್ಲಿ ಪಲ್ಲವ ರಾಜ ವಿಜಯ ದಂತಿವರ್ಮನ್ ಅವರು ಮೊದಲ ಬಾರಿಗೆ ಚಿನ್ನದ ಲೇಪನವನ್ನು ಮಾಡಿದ್ದರು. ಲಭ್ಯವಿರುವ ದಾಖಲೆಗಳ ಪ್ರಕಾರ, ಅಂದಿನಿಂದ, 1958 ರ ಪ್ರಯತ್ನವನ್ನು ಒಳಗೊಂಡಂತೆ, ಇಲ್ಲಿನ ಗೋಪುರದ ಚಿನ್ನದ ಲೇಪನವನ್ನು ಏಳು ಬಾರಿ ಬದಲಾಯಿಸಲಾಗಿದೆ ಅಥವಾ ಮಾರ್ಪಡಿಸಲಾಗಿದೆ.
 
2018 ರಲ್ಲಿ ಟಿಟಿಡಿ ಪ್ರಕಟಿಸಿದ ತಮಿಳು ವಿದ್ವಾಂಸ ಎಂ ವರದರಾಜನ್ ಅವರು ಬರೆದ "ಆನಂದ ನಿಲಯಂ ವಿಮಾನದ ಮಹತ್ವ" ಎಂಬ ಲೇಖನದ ಪ್ರಕಾರ, ತಿರುಮಲ ದೇವಸ್ಥಾನದ ಗೋಪುರವು ಮೂರು ಅಂತಸ್ತಿನ ರಚನೆಯಾಗಿದ್ದು, ಅದರ ಚೌಕದ ತಳವು 27.4 ಅಡಿ ಮತ್ತು ಪರಿಧಿಯು 37.8 ಅಡಿ. ಎತ್ತರವಿದೆ. ವರದರಾಜನ್‌ ಪ್ರಕಾರ, ಮೊದಲ ಎರಡು ಹಂತಗಳು ಆಯತಾಕಾರದಲ್ಲಿವೆ ಮತ್ತು ಮೂರನೆಯ ಹಂತವು ವೃತ್ತಾಕಾರದಲ್ಲಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿ BF.7 ಹೊಸ ರೂಪಾಂತರಿ ವೈರಸ್ ಆತಂಕ