Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ಸದ್ದು ಮಾಡಿದ್ದ ಮೀಟೂ ಪ್ರಕರಣ

Webdunia
ಭಾನುವಾರ, 28 ನವೆಂಬರ್ 2021 (21:31 IST)
ಬೆಂಗಳೂರು: ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ಸದ್ದು ಮಾಡಿದ್ದ ಮೀಟೂ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಶ್ರುತಿ ಹರಿಹರನ್‌ಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ನೋಟೀಸ್ ತಲುಪಿದ ಮೂರು ದಿನದೊಳಗೆ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಶ್ರುತಿ ಹರಿಹರನ್‌ಗೆ ನೋಟಿಸ್ ನಲ್ಲಿ ತಿಳಿಸಲಾಗಿದೆ.
ವಿಸ್ಮಯ ಚಿತ್ರದ ಚಿತ್ರೀಕರಣ ವೇಳೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಆರೋಪಿಸಿದ್ದರು. ಈ ಸಂಬಂಧ 2018ರಲ್ಲಿ ಕಬ್ಬನ್ ಪಾಕ್ ಠಾಣೆಯಲ್ಲಿ ಶ್ರುತಿ ದೂರು ದಾಖಲಿಸಿದ್ದರು. ದೂರಿನ್ವಯ ಅರ್ಜುನ್ ಸರ್ಜಾ ವಿರುದ್ಧ ಭಾರತೀಯ ದಂಡ ಸಂಹಿತೆ 354, 354 ಎ ಮತ್ತು 506 ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಮೂರು ವರ್ಷದ ಬಳಿಕ ಇದೀಗ ಮೀಟೂ ಪ್ರಕರಣ ಮತ್ತೆ ಸದ್ದು ಮಾಡಿದೆ.
ಇದೀಗ ಪ್ರಕರಣ ತನಿಖೆಯು ಅಂತಿಮ ಹಂತಕ್ಕೆ ತಲುಪಿದೆ. ಮೀಟೂ ಹೆಸರಿನಲ್ಲಿ ನಟಿ ಶೃತಿಹರಿಹರನ್ ಕತೆ ಕಟ್ಟಿದ್ದರು ಎನ್ನುವ ಅನುಮಾನ ಕಾಡತೊಡಗಿದೆ. ತನಿಖೆ ವೇಳೆ ಯಾವೂದೇ ಸಾಕ್ಷಿ ಸಿಗದ ಹಿನ್ನೆಲೆಯಲ್ಲಿ ಪೊಲೀಸರು  ಕೋರ್ಟ್‌ನಲ್ಲಿ 'ಬಿ' ರಿಪೋರ್ಟ್ ಸಲ್ಲಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ನಗರ ನಕ್ಸಲರಂತೆ ಮಾತನಾಡುತ್ತಿದ್ದಾರೆ

ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ನಮೂದಿಸಿ: ಬಿ.ವೈ.ವಿಜಯೇಂದ್ರ

ಜುಬೀನ್ ಗರ್ಗ್ ಸಾವಿನ ಸುದ್ದಿ ಕೇಳಿ ಆಘಾತಕ್ಕೀಡಾಗಿದ್ದೇನೆ, ಪ್ರಧಾನಿ ಮೋದಿ ಸಂತಾಪ

ಉತ್ತರಾಖಂಡ ಚಮೋಲಿಯಲ್ಲಿ ಇಂದು ಮತ್ತೇ ಐದು ಶವ ಪತ್ತೆ, ಮೃತರ ಸಂಖ್ಯೆ 7ಕ್ಕೆ ಏರಿಕೆ

ಪಾಕ್‌ ವಿರುದ್ಧದ 1965ರ ಯುದ್ಧದಲ್ಲಿ ಮಡಿದ ವೀರ ಯೋಧರಿಗೆ ರಾಜನಾಥ್ ಸಿಂಗ್ ನಮನ

ಮುಂದಿನ ಸುದ್ದಿ