Publish Date: Fri, 14 Sep 2018 (18:31 IST)
Updated Date: Fri, 14 Sep 2018 (18:34 IST)
ಬಸ್ ನಲ್ಲಿ ಶಾಲೆಗೆ ತೆರಳುತಿದ್ದ ವಿದ್ಯಾರ್ಥಿಗಳ ಮೇಲೆ ಕಂಡಕ್ಟರ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಈಶಾನ್ಯ ಸಾರಿಗೆ ಸಂಸ್ಥೆಯ ಯಾದಗಿರಿ ಜಿಲ್ಲೆಯ ಶಹಾಪುರ ವಿಭಾಗದ ಕಂಡಕ್ಟರ್ ನೊಬ್ಬ ಶಾಲಾ ವಿದ್ಯಾರ್ಥಿಗೆ ಥಳಿಸಿದ್ದಾನೆ.
ಶಹಾಪುರನಲ್ಲಿ ಬಸ್ ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ. ಯಾದಗಿರಿಯಿಂದ ಶಹಾಪುರಗೆ ತೆರಳುತ್ತಿದ್ದ ಬಸ್ ಶಹಾಪುರ ತಾಲೂಕಿನ ಗುಂಡಳ್ಳಿ ತಾಂಡಾದ ಕ್ರಾಸ್ ಹತ್ತಿರ ನಿಲ್ಲಿಸಿತ್ತು. ಈ ವೇಳೆ ದೋರನಹಳ್ಳಿ ಕ್ಯಾಂಪ್ ಗೆ ತೆರಳುವ ವಿದ್ಯಾರ್ಥಿಗಳು ಬಸ್ ಹತ್ತಿದ್ದರು. ಆದರೆ ಬಸ್ ದೋರನಹಳ್ಳಿ ಕ್ಯಾಂಪ್ ನಲ್ಲಿ ನಿಲ್ಲಿಸಬೇಕಾಗಿತ್ತು. ಈ ವೇಳೆ ಬಸ್ ನಿಲ್ಲಿಸದಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಕಂಡಕ್ಟರ್ ಅವರನ್ನು ಬಸ್ ನಿಲ್ಲಿಸಿ ಅಂದಿದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಂಡಕ್ಟರ್ ಹಲ್ಲೆ ಮಾಡಿದ್ದಾನೆ. ನಂತರ ವಿದ್ಯಾರ್ಥಿಗಳನ್ನು ಶಹಾಪುರಗೆ ಕರೆದುಕೊಂಡು ಹೋಗಿದ್ದಾನೆ.
ಆದರೆ ಬೆಳಿಗ್ಗೆ ಶಾಲೆಗೆ ತೆರಳಬೇಕಾದ ವಿದ್ಯಾರ್ಥಿಗಳು ಪೋಷಕರ ಹಾಗೂ ಸಾರ್ವಜನಿಕ ರ ಸಹಾಯದಿಂದ ಮಧ್ಯಾಹ್ನ 2 ಗಂಟೆಗೆ ಶಾಲೆಗೆ ತೆರಳುವಂತಾಗಿದೆ. ಕಂಡಕ್ಟರ್ ನ ಕಾಟದಿಂದ ವಿದ್ಯಾರ್ಥಿಗಳು ಬೇಸತ್ತು ಹೋಗಿದ್ದಾರೆ. ಶಹಾಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.