Select Your Language

Notifications

webdunia
webdunia
webdunia
webdunia

ಎರಡನೇ ದಿನವೂ ಮುಂದುವರಿದ ಕಾರ್ಮಿಕರ ಮುಷ್ಕರ

ಬೆಂಗಳೂರು
ಬೆಂಗಳೂರು : ಕಾರ್ಮಿಕ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ್ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಹ ಬಂದ್ ಮುಂದುವರೆಯಲಿದೆ.


ಮಂಗಳವಾರದ ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ಬಸ್‍ಗಳನ್ನು ರಸ್ತೆಗಿಳಿಸಲು ಬಿಎಂಟಿಸಿ, ಕೆಎಸ್‍ ಆರ್‍ ಟಿಸಿ ನಿರ್ಧರಿಸಿದೆ. ಬಸ್‍ ಗಳು ಆಟೋ, ಓಲಾ, ಊಬರ್ ಎಲ್ಲಾ ಸೌಲಭ್ಯಗಳು ಲಭ್ಯವಿದೆ. ಆಂಬುಲೆನ್ಸ್, ಔಷಧಿ ಮಳಿಗೆಗಳು, ಪೆಟ್ರೋಲ್ ಬಂಕ್ ಗಳು ಯಥಾಸ್ಥಿತಿಯಲ್ಲಿ ಕಾರ್ಯ ನಿರ್ವಹಿಸಲಿವೆ.


ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಇನ್ನು ಮುಂಜಾಗ್ರತಾ ಕ್ರಮವಾಗಿ ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಕೆಲ ಜಿಲ್ಲೆಗಳು ಪರಿಸ್ಥಿತಿ ಆಧಾರದ ಮೇಲೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸೌದಿ ಅರೇಬಿಯದಲ್ಲಿ ಮಹಿಳೆಯರಿಗೆ ತಮ್ಮ ವೈವಾಹಿಕ ಸ್ಥಿತಿಗತಿ ತಿಳಿಯಲು ಹೊಸ ಕಾನೂನು ಜಾರಿ