Select Your Language

Notifications

webdunia
webdunia
webdunia
webdunia

ಸೋಮವಾರ ಜೆಡಿಎಸ್ ನ ಎರಡನೇ ಪಟ್ಟಿ ರಿಲೀಸ್

ಸೋಮವಾರ ಜೆಡಿಎಸ್ ನ ಎರಡನೇ ಪಟ್ಟಿ ರಿಲೀಸ್
hasana , ಭಾನುವಾರ, 2 ಏಪ್ರಿಲ್ 2023 (16:00 IST)
ಮತದಾರರ ಆಶೀರ್ವಾದದಿಂದ ಸರ್ಕಾರ ರಚನೆಗೆ ಅಗತ್ಯವಿರುವ 113 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ. ಚುನಾವಣಾ ಪೂರ್ವ ಸಮೀಕ್ಷಾ ವರದಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ಜೆಡಿಎಸ್ ರಾಜ್ಯದ ಚುಕ್ಕಾಣಿ ಹಿಡಿಯುವುದು ನಿಶ್ಚಿತ. ರಾಷ್ಟ್ರೀಯ ಪಕ್ಷಗಳು ದುಡ್ಡು ಕೊಟ್ಟು ಮಾಡಿಸಿರುವ ಸಮೀಕ್ಷೆಗಳನ್ನು ಗಣನೆಗೆ ತೆಗೆದುಕೊಳ್ಳಬೇಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.ಯಲಹಂಕ ಕ್ಷೇತ್ರದ ದಾಸನಪುರ ಹೋಬಳಿ ಕಾಂಗ್ರೆಸ್ ಮುಖಂಡ ಚಂದ್ರಪ್ಪ ಹಾಗೂ ಅವರ ಬೆಂಬಲಿಗರು ಮತ್ತು ಬಿಜೆಪಿ ಮುಖಂಡರು ಜೆಡಿಎಸ್​ಗೆ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿಗಿಂತ ಜೆಡಿಎಸ್ ಹೆಚ್ಚಿನ ಸ್ಥಾನಗಳಿಸಿ ಅಧಿಕಾರ ಹಿಡಿಯುವುದರಲ್ಲಿ ಯಾವುದೇ ಅನುಮಾನ ಇಲ್ಲ. ರಾಜ್ಯದಲ್ಲಿ ಪ್ರವಾಸ ಮಾಡುವಾಗ ಜೆಡಿಎಸ್ ಪರ ಅಪಾರ ಜನ ಬೆಂಬಲ ವ್ಯಕ್ತವಾಗಿರುವುದು ಖಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಡಿಸ್ಟ್ರಿಕ್ಟ್ ಕಂಪ್ಲೇಂಟ್ ಮಾನಿಟರಿಂಗ್ ಸೆಲ್(DCMC) ಸ್ಥಾಪನೆ