Webdunia - Bharat's app for daily news and videos

Install App

ಅಪಾರ್ಟ್‍ಮೆಂಟ್‍ಗಳಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡು ಬೀಗ ಹಾಕಿರುವ ಮನೆ ಕಳವು

Webdunia
ಸೋಮವಾರ, 18 ಅಕ್ಟೋಬರ್ 2021 (21:16 IST)
ಅಪಾರ್ಟ್‍ಮೆಂಟ್‍ಗಳಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡು ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದ ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರು ಆರೋಪಿಗಳನ್ನು ಗೋವಿಂದಪುರ ಠಾಣೆ ಪೆÇಲೀಸರು ಬಂಧಿಸಿದ್ದಾರೆ.
ನೇಪಾಳ ಮೂಲದ ಮೀನಾರಾಜ್ ಭಟ್(37), ಆತನ ಸಹೋದರ ತುಲಾರಾಮ್ ಭಟ್(33),  ನಾರಾಯಣ ಶ್ರೇಷ್ಟ (46), ಶಿವ ಭಂಡಾರಿ(37) ಮತ್ತು ಗೋವಿಂದಪುರ ನಿವಾಸಿ ಸಲೀಂ ಪಾಷಾ(24) ಬಂಧಿತರು. ಆರೋಪಿಗಳಿಂದ 10.89 ಲಕ್ಷ ರೂ. ಮೌಲ್ಯದ 105 ಗ್ರಾಂ ಚಿನ್ನಾಭರಣ, 1290 ಗ್ರಾಂ ಬೆಳ್ಳಿಯ ವಸ್ತುಗಳು, ಎಂಟು ವಿದೇಶಿ ಕರೆನ್ಸಿಗಳು, 12,000 ರೂ. ನಗದು, ಒಂದು ಕಾರು, ಬೈಕ್ ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಆರೋಪಿಗಳ ಬಂಧನದಿಂದ ಮೂರು ಕನ್ನಗಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೆÇಲೀಸರು ತಿಳಿಸಿದರು. 
ಆರೋಪಿಗಳ ಪೈಕಿ ಸಲೀಂ ಪಾಷಾ ಹಳೇ ಆರೋಪಿಯಾಗಿದ್ದು, ಈತನ ವಿರುದ್ಧ ನಗರದ ನಾನಾ ಠಾಣೆಗಳಲ್ಲಿ ಮನೆಗಳವು ಪ್ರಕರಣಗಳು ದಾಖಲಾಗಿವೆ. ಇತರೆ ಆರೋಪಿಗಳು ಗೋವಿಂದಪುರ ಠಾಣೆ ವ್ಯಾಪ್ತಿಯ ಅಪಾರ್ಟ್‍ಮೆಂಟ್‍ಗಳಲ್ಲಿ ಭದ್ರತಾ ಸಿಬ್ಬಂದಿ ಮತ್ತು ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದಾರೆ. ಈ ಮಧ್ಯೆ, ಭದ್ರತಾ ಸಿಬ್ಬಂದಿಗಳಿಗೆ ಸಲೀಂ ಪಾಷಾನ ಪರಿಚಯವಾಗಿದೆ. ಸಲೀಂ ನೇಪಾಳ ಮೂಲದವರಿಗೆ ಇಂತಿಷ್ಟು ಕಮಿಷನ್ ಕೊಡುವುದಾಗಿ ಹೇಳಿ ಕೃತ್ಯಕ್ಕೆ ಸಹಕಾರ ನೀಡುವಂತೆ ಕೋರುತ್ತಿದ್ದ. ಈ ಹಿನ್ನೆಲೆಯಲ್ಲಿ ಆರೋಪಿಗಳು ತಾವು ಕೆಲಸ ಮಾಡುವ ಮನೆ ಮಾಲೀಕರ ಚಟುವಟಿಕೆಗಳು ಮತ್ತು ಮನೆಯ ನಕಲಿ ಕೀಗಳನ್ನು ಸಂಗ್ರಹಿಸುತ್ತಿದ್ದರು. ಮನೆಯವರು ಕಾರ್ಯನಿಮಿತ್ತ ಹೊರಗಡೆ ಅಥವಾ ಊರಿಗೆ ಹೋದಾಗ ಸಲೀಂ ಪಾಷಾನಿಗೆ ಮಾಹಿತಿ ನೀಡುತ್ತಿದ್ದರು. ಬಳಿಕ ಪಾಷಾ, ನಕಲಿ ಕೀ ಬಳಸಿ ಮನೆಗಳಿಗೆ ನುಗ್ಗಿ ಚಿನ್ನಾಭರಣ ಕಳವು ಮಾಡುತ್ತಿದ್ದ ಎಂದು ಪೆÇಲೀಸರು ಹೇಳಿದರು.
ಆರೋಪಿಗಳು ಬಂದ ಹಣದಲ್ಲಿ ಮೋಜು-ಮಸ್ತಿಗಾಗಿ ಹಣ ವ್ಯಯಿಸುತ್ತಿದ್ದರು. ಬಾಕಿ ಹಣವನ್ನು ನೇಪಾಳದಲ್ಲಿರುವ ತಮ್ಮ ಸಂಬಂಧಿಗಳಿಗೆ ಕಳಿಸುತ್ತಿದ್ದರು ಎಂದು ಪೆÇಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ.
ಸಲೀಂ ಪಾಷಾನಿಂದ ಕಮಿಷನ್ ಲೆಕ್ಕದಲ್ಲಿ ನಗದು, ಚಿನ್ನಾಭರಣ ಪಡೆಯುತ್ತಿದ್ದ ಭದ್ರತಾ ಸಿಬ್ಬಂದಿಗಳು ಇತ್ತೀಚೆಗೆ ಕೃತ್ಯವೆಸಗಿ ನೇಪಾಳಕ್ಕೆ ಪರಾರಿಯಾಗುತ್ತಿದ್ದರು. ಈ ಮಾಹಿತಿ ಪಡೆದ ಗೋವಿಂದಪುರ ಠಾಣೆ ಇನ್‍ಸ್ಪೆಕ್ಟರ್ ಆರ್.ಪ್ರಕಾಶ್ ಮತ್ತು ಪಿಎಸ್‍ಐ ಇಮ್ರಾನ್ ಅಲಿ ಖಾನ್ ನೇತೃತ್ವದ ತಂಡ ಗಡಿಯಲ್ಲಿಯೇ ಆರೋಪಿಗಳನ್ನು ಬಂಧಿಸಿ ನಗರಕ್ಕೆ ಕರೆತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments