Daily Horoscope

Select Your Language

Notifications

webdunia
webdunia
webdunia
webdunia

ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ವರದಿ ತೃಪ್ತಿ ತಂದಿಲ್ಲ

dk shivakumar
ಬೆಂಗಳೂರು-ಲೋಕಸಭಾ ಕ್ಷೇತ್ರದಿಂದ ಸಚಿವರು ಸಿದ್ಧಪಡಿಸಿರುವ ಸಂಭಾವ್ಯರ ಪಟ್ಟಿ ನನಗೆ ತೃಪ್ತಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂಭಾವ್ಯ ಅಭ್ಯರ್ಥಿಗಳ ಬಗ್ಗೆಗಿನ ವರದಿಗಳು ತೃಪ್ತಿಕರವಾಗಿಲ್ಲ, ನಾನು, ಎಐಸಿಸಿ, ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಮೀಕ್ಷೆ ನಡೆಸುತ್ತಿದ್ದೇವೆ ಎಂದರು. ಎಐಸಿಸಿ ನಾಯಕರು ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಅಜೆಂಡಾ ನೀಡಿದ್ದಾರೆ.

ಗುರುವಾರ ನಾಲ್ಕು ರಾಜ್ಯಗಳ ಸಚಿವರ ಸಭೆಗೆ ಎಐಸಿಸಿ ಕರೆದಿದೆ. ಅಲ್ಲಿ ಅವರು ನಮಗೆ ಚುನಾವಣೆಗೆ ಕೆಲಸ ಮಾಡುವ ವಿಧಾನಗಳನ್ನು ನೀಡುತ್ತಾರೆ, ನಮಗೆ ಹೆಚ್ಚು ಸಮಯವಿಲ್ಲ. ಕ್ಷೇತ್ರಗಳಲ್ಲಿ ಕೆಲಸ ಮಾಡಲು ಪ್ರಾರಂಭಿಸಬೇಕು. ವಿಧಾನಸಭಾ ಚುನಾವಣೆಯ ಸಮಯದಲ್ಲಿದ್ದ ಬದ್ಧತೆಯನ್ನು ಪ್ರದರ್ಶಿಸಬೇಕು. ಪ್ರತಿಯೊಬ್ಬರೂ ತಮ್ಮ ವೈಯಕ್ತಿಕ ಹಿತಾಸಕ್ತಿಗಿಂತ ಪಕ್ಷದ ಹಿತಾಸಕ್ತಿ ಬಗ್ಗೆ ಗಮನ ಕೊಡಬೇಕು ಎಂದು ಸಲಹೆ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಾರ್ಯಕರ್ತರಿಗೆ ಕ್ಷಮೆ ಕೇಳಿದ ನಾರಾಯಣಗೌಡ