Select Your Language

Notifications

webdunia
webdunia
webdunia
webdunia

ಕ್ಲಬ್ ನಿರ್ಮಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆ

ಕ್ಲಬ್ ನಿರ್ಮಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆ
bangalore , ಶುಕ್ರವಾರ, 8 ಅಕ್ಟೋಬರ್ 2021 (16:27 IST)
ಬೆಂಗಳೂರು: ಬಾಲಬ್ರೂಯಿ ಅತಿಥಿ ಗೃಹ ಕೆಡವಿ ಕ್ಲಬ್‌ ನಿರ್ಮಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಇದೀಗ ಹಿನ್ನಡೆಯಾಗಿದೆ. ಈ ಕುರಿತು ಮಧ್ಯಂತರ ಆದೇಶ ನೀಡಿರುವ  ಹೈಕೋರ್ಟ್ ಯಥಾಸ್ಥಿತಿ ಕಾಪಾಡಿಕೊಳ್ಳಲು ಆದೇಶಿಸಿದೆ.
ಬಾಲಬ್ರೂಯಿ ಆವರಣದ ಮರಗಳನ್ನು ಕಡಿಯಬಾರದು ಎಂದು ಹೈಕೋರ್ಟ್​ ಸ್ಪಷ್ಟವಾಗಿ ಸೂಚಿಸಿದೆ. ಬಾಲಬ್ರೂಯಿ ಆವರಣದ ಮರಗಳ ಸರ್ವೆ ನಡೆಸಿ ವರದಿ ಸಲ್ಲಿಸಬೇಕು. ಕೋರ್ಟ್ ಅನುಮತಿಯಿಲ್ಲದೇ ಮರಗಳನ್ನು ಕಡಿಯಬಾರದು ಎಂದು ಹೈಕೋರ್ಟ್ ವಿಭಾಗೀಯ ಪೀಠವು ಮಧ್ಯಂತರ ಆದೇಶದಲ್ಲಿ ತಿಳಿಸಿ, ವಿಚಾರಣೆಯನ್ನು ನ್ಯಾಯಾಲಯವು ನವೆಂಬರ್​ 19ಕ್ಕೆ ಮುಂದೂಡಿದೆ.
ಕಾನ್​ಸ್ಟಿಟ್ಯೂಷನ್ ಕ್ಲಬ್ ನಿರ್ಮಿಸಲು ಇತಿಹಾಸ ತಜ್ಞರಿಂದ ವಿರೋಧ:
ಪಾರಂಪರಿಕ ಮೌಲ್ಯ ಹೊಂದಿರುವ ಬಾಲಬ್ರೂಯಿ ಕಟ್ಟಡದಲ್ಲಿ ಕಾನ್​ಸ್ಟಿಟ್ಯೂಷನ್ ಕ್ಲಬ್ ನಿರ್ಮಿಸುವ ಸರ್ಕಾರಕ್ಕೆ ಪ್ರಸ್ತಾವಕ್ಕೆ ಈ ಹಿಂದೆ ಪರಿಸರವಾದಿಗಳು ಮತ್ತು ನಗರದ ಇತಿಹಾಸ ತಜ್ಞರಿಂದ ವಿರೋಧ ವ್ಯಕ್ತವಾಗಿತ್ತು. ಬೆಂಗಳೂರಿನ ಪರಂಪರೆ ಸಾರುವ ಇಂಥ ತಾಣಗಳನ್ನು ಕಾಪಾಡಬೇಕು. ಒಮ್ಮೆ ಇಂಥ ಕಟ್ಟಡಗಳ ಮೂಲ ಸ್ವರೂಪ ನಾಶಪಡಿಸಿದರೆ ಮತ್ತೆ ರೂಪಿಸುವುದು ಅಸಾಧ್ಯ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಕರಾವಳಿ ಹಾಗೂ ಒಳನಾಡಿನ ಬಹುತೇಕ ಕಡೆ ಮಳೆ