Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಸರಕಾರದ ನಾಲ್ಕು ವರ್ಷದ ಸಾಧನೆ ಶೂನ್ಯ: ಈಶ್ವರಪ್ಪ

ಸಿದ್ದರಾಮಯ್ಯ ಸರಕಾರದ ನಾಲ್ಕು ವರ್ಷದ ಸಾಧನೆ ಶೂನ್ಯ: ಈಶ್ವರಪ್ಪ
ಬೆಂಗಳೂರು: , ಶನಿವಾರ, 13 ಮೇ 2017 (12:39 IST)
ಸಿದ್ದರಾಮಯ್ಯ ಸರಕಾರದ ನಾಲ್ಕು ವರ್ಷದ ಸಾಧನೆ ಶೂನ್ಯ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
 
ಸಿದ್ದರಾಮಯ್ಯ ಸರಕಾರದ ನಾಲ್ಕು ವರ್ಷದ ಸಾಧನೆಯ ಬಗ್ಗೆ ದೊಡ್ಡ ದೊಡ್ಡ ಕಟೌಟ್‌ಗಳನ್ನು ಹಾಕಿಕೊಂಡು ಸಾಧನೆ ಮಾಡಿದ್ದಾಗಿ ಸರಕಾರ ಬಿಂಬಿಸುತ್ತಿದೆ ಎಂದು ಕಿಡಿಕಾರಿದರು.
 
ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಭ್ರಷ್ಟಾಚಾರ ಹೆಚ್ಚಳವಾಗಿದೆ. ಸರಕಾರ ಬರಗಾಲ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
ಉಪಚುನಾವಣೆಯಲ್ಲಿ ಜಯಗಳಿಸಿದ ನಂತರ ಸಿಎಂ ಸಿದ್ದರಾಮಯ್ಯಗೆ ದುರಹಂಕಾರ ಹೆಚ್ಚಾಗಿದೆ. ಮುಂಬರುವ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಧಾನಪರಿಷಪ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಎಚ್ಚರಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಸಿಎಂ ಸಿದ್ದು ಸರ್ಕಾರಕ್ಕೆ ನಾಲ್ಕು ವರ್ಷದ ಸಂಭ್ರಮ