Select Your Language

Notifications

webdunia
webdunia
webdunia
webdunia

ಜಯನಗರದಲ್ಲಿ ಸೀಜ್‌ ಆಗಿದ್ದು ಬಿಜೆಪಿ ಕೊಳ್ಳೆ ಹೊಡೆದ ಪಾಪದ ಹಣ: ಸಚಿವ ರಾಮಲಿಂಗಾರೆಡ್ಡಿ

ಜಯನಗರದಲ್ಲಿ ಸೀಜ್‌ ಆಗಿದ್ದು ಬಿಜೆಪಿ ಕೊಳ್ಳೆ ಹೊಡೆದ ಪಾಪದ ಹಣ: ಸಚಿವ ರಾಮಲಿಂಗಾರೆಡ್ಡಿ

Sampriya

ಬೆಂಗಳೂರು , ಶನಿವಾರ, 13 ಏಪ್ರಿಲ್ 2024 (19:21 IST)
Photo Courtesy X
ಬೆಂಗಳೂರು: ಬೆಂ. ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜಯನಗರದಲ್ಲಿ ಬಿಜೆಪಿಯ ದಾಖಲೆಯಿಲ್ಲದ ಕೋಟ್ಯಂತರ ರೂಪಾಯಿ ಹಣವನ್ನು ಚುನಾವಣೆ ಆಯೋಗ ಜಪ್ತಿ ಮಾಡಿದ್ದು, ಇದು ಬಿಜೆಪಿ ಎಲೆಕ್ಟೊರಲ್ ಬಾಂಡ್ ರೂಪದಲ್ಲಿ ಕೊಳ್ಳೆ ಹೊಡೆದ ಪಾಪದ ಹಣವಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಬೆಂಗಳೂರಿನ ಜಯನಗರದಲ್ಲಿ ಕಾರಿನಲ್ಲಿ ದಾಖಲೆ ಇಲ್ಲದೆ ಕೋಟಿ ಕೋಟಿ ಹಣವನ್ನು ಅಕ್ರಮವಾಗಿ ಸಾಗಿಸುತ್ತಿದ್ದವರನ್ನು  ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದರು. ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬಿಜೆಪಿ ಮೇಲೆ ರಾಮಲಿಂಗಾ ರೆಡ್ಡಿ ಆರೋಪ ಮಾಡಿ ಪೋಸ್ಟ್‌ ಹಂಚಿಕೊಂಡಿದ್ದಾರೆ.  

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜಯನಗರದಲ್ಲಿ ಬಿಜೆಪಿಯ ದಾಖಲೆಯಿಲ್ಲದ ಕೋಟ್ಯಂತರ ರೂಪಾಯಿ ಹಣವನ್ನು ಚುನಾವಣೆ ಆಯೋಗ ಜಪ್ತಿ ಮಾಡಿದ್ದು, ಇದು ಬಿಜೆಪಿ ಎಲೆಕ್ಟೊರಲ್ ಬಾಂಡ್ ರೂಪದಲ್ಲಿ ಕೊಳ್ಳೆ ಹೊಡೆದ ಪಾಪದ ಹಣವಾಗಿದೆ.

ಈ ಹಣವನ್ನು ಪ್ರಧಾನಿಯ ಬೆಂಗಳೂರು ಕಾರ್ಯಕ್ರಮಕ್ಕೆ ಜನ ಸೇರಿಸಲು ಬಳಸುವ ಉದ್ದೇಶದಿಂದ ಸಾಗಿಸುತ್ತಿದ್ದರೆ?

ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಚುನಾವಣೆ ನಡೆಸುವುದು, ಬಹುಮತ ಬರದಿದ್ದಾಗ ನೂರಾರು ಕೋಟಿ ಹಣ ಹಾಕಿ ಶಾಸಕರು, ಸಂಸದರನ್ನು ಖರೀದಿಸುವುದು ಬಿಜೆಪಿ ಜಾಯಮಾನ.

ಈಗ ಅವರ ಹಣವಂತೂ ಹೋಗಿದೆ, ಮಾನವನ್ನಾದರೂ ಉಳಿಸಿಕೊಳ್ಳಬೇಕು ಎನ್ನುವ ಕಾರಣದಿಂದ ಕಾಂಗ್ರೆಸ್ ಮೇಲೆ ಆಧಾರ ರಹಿತ ಆರೋಪವನ್ನು ಮಾಡುತ್ತಿದ್ದಾರೆ.

ಈ ಬಾರಿಯ ಬೆಂಗಳೂರು ದಕ್ಷಿಣ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭಯ ಉಂಟಾಗಿದ್ದು, ಲೂಟಿ ಮಾಡಿದ ಹಣವನ್ನೆಲ್ಲ ಖರ್ಚು ಮಾಡಿಯಾದರೂ ಶತಾಯಗತಾಯ ಗೆಲ್ಲಬೇಕು ಎಂದು ಅವರ ತಂಡ ಹೊರಟಿರುವಂತಿದೆ.

ನಾವು ಜನ ಬಲವನ್ನು ನಂಬಿದವರು, ಬಿಜೆಪಿಯಂತೆ ಹಣ ಬಲವನ್ನಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ರಾಮೇಶ್ವರಂ ಕೆಫೆಯ ಸಣ್ಣ ಸ್ಪೋಟ ಎಂದು ಡಿಕೆಶಿ ತನಿಖೆಯ ದಿಕ್ಕು ತಪ್ಪಿಸಿದ್ದರು: ಆರ್‌.ಅಶೋಕ್