Webdunia - Bharat's app for daily news and videos

Install App

ಮಗಳ ಮೇಲೆಯೇ ರೇಪ್ ಮಾಡಿದ ಪಾಪಿ ತಂದೆ!

Webdunia
ಮಂಗಳವಾರ, 1 ಮಾರ್ಚ್ 2022 (11:07 IST)
ಬೆಂಗಳೂರು :  ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಪಾಪಿ ತಂದೆಗೆ ಅಧೀನ ನ್ಯಾಯಾಲಯ ವಿಧಿಸಿದ್ದ 10 ವರ್ಷಗಳ ಜೈಲು ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿದೆ.
 
ಶಿಕ್ಷೆ ರದ್ದು ಕೋರಿ ಆರೋಪಿ ತಂದೆ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಅವರ ಪೀಠ ಈ ಆದೇಶ ಮಾಡಿದೆ. ಆರೋಪಿ ತಂದೆ 2014ರ ಸೆ.27ರ ರಾತ್ರಿ ತನ್ನ 13 ವರ್ಷದ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ.

ಸಂತ್ರಸ್ತೆಯ ಚಿಕ್ಕಮ್ಮ ನೀಡಿದ ದೂರು ಆಧರಿಸಿ ಬೆಂಗಳೂರಿನ ಎಚ್ಎಎಲ್ ಠಾಣಾ ಪೊಲೀಸರು ಎಫ್ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದರು. ಅಧೀನ ನ್ಯಾಯಾಲಯ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ಎರಡು ಸಾವಿರ ರು. ದಂಡ ವಿಧಿಸಿತ್ತು.

ಈ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದ ಆರೋಪಿ ತಂದೆ, ದೂರು ದಾಖಲಿಸಲು ಎರಡು ದಿನಗಳ ವಿಳಂಬ ಮಾಡಲಾಗಿದೆ. ಇದು ಅಸಾಮಾನ್ಯ ವಿಳಂಬವಾಗಿದೆ. ಮ್ಯಾಜಿಸ್ಪ್ರೇಟ್ ಎದುರು ಸಂತ್ರಸ್ತೆ ನೀಡಿರುವ ಹೇಳಿಕೆಯಲ್ಲಿ ವಿರೋಧಾಭಾಸಗಳಿವೆ. ಘಟನೆ ವೇಳೆ ಮನೆಯಲ್ಲಿದ್ದ ತಾಯಿ ಹಾಗೂ ಅಜ್ಜಿಯನ್ನು ತನಿಖಾಧಿಕಾರಿಯು ವಿಚಾರಣೆಗೆ ಒಳಪಡಿಸಿಲ್ಲ. ಆದ್ದರಿಂದ ಶಿಕ್ಷೆ ರದ್ದುಪಡಿಸಬೇಕು ಎಂದು ಕೋರಿದ್ದರು.

ಈ ಮೇಲ್ಮನವಿಯನ್ನು ತಿರಸ್ಕರಿಸಿರುವ ಹೈಕೋರ್ಟ್, ಸಂತ್ರಸ್ತ ಬಾಲಕಿಯ ತಾಯಿ ತೀವ್ರ ಅಸ್ವಸ್ಥ ಸ್ಥಿತಿಯಲ್ಲಿದ್ದರು. ಸಂತ್ರಸ್ತೆಯ ತಾಯಿ ದೂರು ದಾಖಲಿಸಿದ ಒಂಬತ್ತನೇ ದಿನಕ್ಕೆ ನಿಧನರಾಗಿದ್ದಾರೆ. ಅಜ್ಜಿಯೂ ಇಹಲೋಕ ತ್ಯಜಿಸಿದ್ದಾರೆ. ಹೀಗಾಗಿ, ಸಂತ್ರಸ್ತ ಬಾಲಕಿಯ ಚಿಕ್ಕಮ್ಮ ದೂರು ದಾಖಲಿಸಿದ್ದಾರೆ. ಇನ್ನು ದೂರು ದಾಖಲಿಸುವಲ್ಲಿ ಹೆಚ್ಚೇನೂ ವಿಳಂಬವಾಗಿಲ್ಲ.

ಸಂತ್ರಸ್ತೆ ತನ್ನ ತಂದೆಯ ಕೃತ್ಯದ ಬಗ್ಗೆ ಹೇಳಿದ್ದಾಳೆ. ಆಕೆಯ ಹೇಳಿಕೆಯನ್ನು ಚಿಕ್ಕಮ್ಮ, ಚಿಕ್ಕಪ್ಪ, ವೈದ್ಯರು ಮತ್ತು ವೈದ್ಯಕೀಯ ಪುರಾವೆಗಳು ದೃಢಪಡಿಸಿವೆ. ಆದ್ದರಿಂದ ಆರೋಪಿಯ ಕೋರಿಕೆ ಪರಿಗಣಿಸಲಾಗದು ಎಂದು ಅಭಿಪ್ರಾಯಪಟ್ಟು ಜೈಲು ಶಿಕ್ಷೆ ಕಾಯಂಗೊಳಿಸಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments