Webdunia - Bharat's app for daily news and videos

Install App

ಭಾರತ ಬಂದ್ ವೇಳೆ ಅಂಗಡಿ ಮುಚ್ಚದ ವ್ಯಾಪಾರಿ ಮೇಲೆ ಹಲ್ಲೆ

Webdunia
ಶನಿವಾರ, 15 ಸೆಪ್ಟಂಬರ್ 2018 (14:05 IST)
ಭಾರತ ಬಂದ್ ಗೆ ಕರೆ ನೀಡಿದ್ದ ದಿನ ವ್ಯಾಪಾರ ಬಂದ್ ಮಾಡಿಲ್ಲ, ಅಂಗಡಿ ಮುಚ್ಚಿಲ್ಲ ಎನ್ನುವ ಕಾರಣಕ್ಕೆ ಉದ್ಯಮಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ಉದ್ಯಮಿ ಹಾಗೂ ಬಿಜೆಪಿಯ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ. ಕುಂದಾಪುರ ತಾಲೂಕಿನ ತೆಕ್ಕಟ್ಟೆಯಲ್ಲಿ ಘಟನೆ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಕೃಷ್ಣಮೂರ್ತಿ ಕೊಠಾರಿ ಸದ್ಯ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭಾರತ್ ಬಂದ್ ವೇಳೆ ಅಂಗಡಿ ಮುಚ್ಚದಿರುವುದೇ ಹಲ್ಲೆಗೆ ಕಾರಣ ಎನ್ನಲಾಗಿದೆ. ಈ ಕುರಿತು ಸ್ಥಳೀಯ ರಾಜಕೀಯ ಮುಖಂಡರ ಮೇಲೆ ಆರೋಪ ಕೇಳಿಬಂದಿದೆ. ಬಂದ್ ನಿರಾಕರಿಸಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿಬರುತ್ತಿದೆ.

ಸುದೀಪ್ ಶೆಟ್ಟಿ, ಸಂತೋಷ್ ಯಾನೆ ಸಂತು, ಶಶಿ, ಗಿರೀಶ್, ಹರೀಶ್, ಸಂದೇಶ್ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ.
ಮಾರಕಾಸ್ತ್ರ ಹಿಡಿದು ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಬಳಿಕ ಹಲ್ಲೆ ನಡೆಸಿದ ವೇಳೆ ಒಂದು ಲಕ್ಷ ಮೌಲ್ಯದ ಚಿನ್ನದ ಸರ, ಹಣ ದರೋಡೆ ಮಾಡಿರುವ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಬ್ರಹ್ಮಾವರ ಸಿಪಿಐ ಭೇಟಿ ನೀಡಿದ್ದು, ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments