ಮದ್ಯ ಸೇವಿಸಲು ಹಣ ನೀಡದಿದ್ದಕ್ಕೆ ಹೆತ್ತ ತಾಯಿಗೆ ಬೆಂಕಿ ಹಚ್ಚಿದ ಮಗ

Webdunia
ಸೋಮವಾರ, 10 ಡಿಸೆಂಬರ್ 2018 (06:37 IST)
ಬೆಂಗಳೂರು : ಕುಡುಕ ಮಗನೊಬ್ಬ ಹೆತ್ತ ತಾಯಿಯ ಮೇಲೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನಲ್ಲಿ  ನಡೆದಿದೆ.


ಉತ್ತಮ್‍ ಕುಮಾರ್ ಹೆತ್ತ ತಾಯಿ ಭಾರತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ ಮಗ.  ಈತ ಡಿಸೆಂಬರ್ 6ರ ರಾತ್ರಿ ತನ್ನ ತಾಯಿ ಭಾರತಿ ಬಳಿ ಮದ್ಯ ಸೇವಿಸಲು ಹಣ ಕೇಳಿದ್ದಾನೆ. ಇದಕ್ಕೆ ತಾಯಿ ಹಣ ನೀಡಲು ನಿರಾಕರಿಸಿದ ಕಾರಣ ಕೋಪಗೊಂಡ ಆತ ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ.


ಕೂಡಲೇ ಭಾರತಿ ಪತಿ, ಪತ್ನಿಯನ್ನು ರಕ್ಷಣೆ ಮಾಡಿ ಹೊಯ್ಸಳ ಪೊಲೀಸರಿಗೆ ಕರೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಕೂಡಲೇ ಘಟನಾ  ಸ್ಥಳಕ್ಕೆ ಬಂದು ಸುಟ್ಟಗಾಯಗಳಿಂದ ಬಳಲುತ್ತಿದ್ದ ಭಾರತಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಭಾರತಿ ಎದೆ, ಹೊಟ್ಟೆ ಭಾಗದಲ್ಲಿ ಸುಟ್ಟ ಗಾಯಗಳಾಗಿದ್ದು  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಈ ಕುರಿತು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಯ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments