Publish Date: Sun, 28 Jul 2019 (10:41 IST)
Updated Date: Sun, 28 Jul 2019 (10:43 IST)
ಬೆಂಗಳೂರು : ಇಂದು ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಅವರು ಮತ್ತೆ ತುರ್ತು ಸುದ್ದಿಗೋಷ್ಠಿ ಕರೆದಿದ್ದು, ಮತ್ತಷ್ಟು ಶಾಸಕರನ್ನು ಅನರ್ಹಗೊಳಿಸುತ್ತಾರಾ? ಎಂಬ ಪ್ರಶ್ನೆ ಉದ್ಭವವಾಗಿದೆ.
ಈ ಹಿಂದೆ ತುರ್ತು ಸುದ್ದಿಗೋಷ್ಠಿ ಕರೆದ ಸ್ಪೀಕರ್ ಕಾಂಗ್ರೆಸ್ ನ ಮೂವರು ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮತ್ತು ಕೆಪಿಜೆಪಿ ಶಾಸಕ ಆರ್. ಶಂಕರ್ ಅವರನ್ನು ಅನರ್ಹಗೊಳಿಸಿದ್ದರು.
ಇದೀಗ ಸ್ಪೀಕರ್ ರಮೇಶ್ ಕುಮಾರ್ ಅವರು ಇಂದು ಬೆಳಗ್ಗೆ 11.30 ಕ್ಕೆ ಶಾಸಕರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದು, ಸೋಮವಾರ ಸಿಎಂ ಯಡಿಯೂರಪ್ಪ ಬಹುಮತ ಸಾಬೀತು ಪಡಿಸುವ ಮುನ್ನವೇ ಉಳಿದ ಶಾಸಕರ ಬಗ್ಗೆಯೂ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.