Select Your Language

Notifications

webdunia
webdunia
webdunia
Sunday, 20 April 2025
webdunia

ಲಾಕ್‌ ಡೌನ್ ಹೀಗೆ ಮಾಡಿ ಎಂದ ಸ್ಪೀಕರ್

ಕೋವಿಡ್ – 19
ಕಾರವಾರ , ಮಂಗಳವಾರ, 7 ಏಪ್ರಿಲ್ 2020 (20:15 IST)
ಕೋವಿಡ್- 19 ವೈರಸ್ ಹರಡುವುದನ್ನು ತಡೆಗಟ್ಟಲು ಲಾಕ್‌ ಡೌನ್ ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸ್ಪೀಕರ್ ಹೇಳಿದ್ದಾರೆ.

ಶಿರಸಿಯಲ್ಲಿ ವಲಸೆ ಕಾರ್ಮಿಕರಿಗೆ ಕೆಎಮ್‌ಎಫ್ ವತಿಯಿಂದ ಉಚಿತವಾಗಿ ನೀಡಲಾದ ನಂದಿನಿ ಹಾಲಿನ ಪ್ಯಾಕೆಟ್‌ಗಳನ್ನು ವಿತರಿಸಿ ಮಾತನಾಡಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಪ್ರಧಾನಿ ಮೋದಿ ದೇಶವಾಸಿಗಳ ಸುರಕ್ಷತೆಯ ದೃಷ್ಠಿಯಿಂದ ಲಾಕ್‌ಡೌನ್ ಘೋಷಿಸಿದ್ದಾರೆ. ಇದನ್ನು ನಾವೆಲ್ಲರೂ ಸೇರಿ ಯಶಸ್ವಿಗೊಳಿಸಿ, ಕೊವಿಡ್-19 ವೈರಸ್‌ನ್ನು ಹಿಮ್ಮೆಟ್ಟಿಸೋಣ ಎಂದು  ಹೇಳಿದರು.

 ಔಷಧಿ ಸೇರಿದಂತೆ ಅಗತ್ಯ ವಸ್ತುಗಳನ್ನು ಜನತೆಯ ಮನೆ ಮನೆಗೆ ತಲುಪಿಸಲು ಜಿಲ್ಲೆಯಲ್ಲಿ ಅಧಿಕಾರಿಗಳು ಸಿದ್ಧರಾಗಿದ್ದಾರೆ. ಹೀಗಾಗಿ ಸಾರ್ವಜನಿಕರು ಅನಗತ್ಯವಾಗಿ ಮನೆ ಹೊರಗೆ ಬರಬಾರದು ಎಂದಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಲಾಕ್ ಡೌನ್ ಈ ಜಿಲ್ಲೆಯಲ್ಲಿ ಇನ್ನಷ್ಟು ಬಿಗಿಯಾಯ್ತು