Publish Date: Fri, 26 Jul 2019 (07:56 IST)
Updated Date: Fri, 26 Jul 2019 (07:58 IST)
ಬೆಂಗಳೂರು : ಮೂವರು ಅತೃಪ್ತ ಶಾಸಕರನ್ನು ಅನರ್ಹಗೊಳಿಸುವುದರ ಮೂಲಕ ಸ್ಪೀಕರ್ ರಮೇಶ್ ಕುಮಾರ್ ಅವರು ಅತೃಪ್ತರಿಗೆ ಬಿಗ್ ಶಾಕ್ ನೀಡಿದ್ದಾರೆ.
ರಾಣೇಬೆನ್ನೂರು ಶಾಸಕ ಆರ್.ಶಂಕರ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಮೂವರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಹೊಳಿಸಿ ಅದೇಶ ಹೊರಡಿಸಿದ್ದು,, ಅನರ್ಹಗೊಂಡಿರುವ ಶಾಸಕರು 15 ವಿಧಾನಸಭೆ ಅವಧಿ ಅಂದ್ರೆ 3 ವರ್ಷ 10 ತಿಂಗಳು ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಿಲ್ಲ ಎಂಬುದನ್ನು ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದ್ದಾರೆ.
ಅಲ್ಲದೇ ಇನ್ನುಳಿದ ರಾಜೀನಾಮೆ ನೀಡಿರುವ ಶಾಸಕರ ಪ್ರಕರಣಗಳ ಬಗ್ಗೆ ಅಧ್ಯಯನ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸವಿವರವಾಗಿ ಮಾಹಿತಿ ನೀಡುವುದಾಗಿ ಸ್ಪೀಕರ್ ತಿಳಿಸಿದ್ದಾರೆ. ಆದಕಾರಣ ಇದೀಗ ಉಳಿದ ಅತೃಪ್ತರಲ್ಲಿ ಆತಂಕ ಮನೆಮಾಡಿದೆ ಎನ್ನಲಾಗಿದೆ.