Select Your Language

Notifications

webdunia
webdunia
webdunia
webdunia

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ರಾಜ್ಯ ಇಲಾಖೆ

Karnataka Police Department

Sampriya

ಬೆಂಗಳೂರು , ಸೋಮವಾರ, 21 ಅಕ್ಟೋಬರ್ 2024 (17:46 IST)
Photo Courtesy X
ಬೆಂಗಳೂರು: ಪೊಲೀಸ್ ಇಲಾಖೆಯ ಕೆಲಸದ ನಿರೀಕ್ಷಯೆಲ್ಲಿರು ಆಕಾಂಕ್ಷಿಗಳಿಗೆ ರಾಜ್ಯ ಗೃಹ ಇಲಾಖೆ ದೀಪಾವಳಿಗೂ ಮುನ್ನವೇ ಭರ್ಜರಿ ಉಡುಗೊರೆ ಸಿಕ್ಕಿದೆ. ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ತಾತ್ಕಾಲಿಕ ಪಟ್ಟಿಯನ್ನು ರಾಜ್ಯ ಗೃಹ ಇಲಾಖೆ ಇಂದು ಪ್ರಕಟ ಮಾಡಿದೆ.

ಈ ಹಿಂದೆ ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಇದು ರಾಜ್ಯದಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಇದಾದ ಬಳಿಕ ಹೈಕೋರ್ಟ್‌ ನೀಡಿದ್ದ ಸೂಚನೆಯ ಅನ್ವಯ ರಾಜ್ಯ ಸರ್ಕಾರ ಮರು ಪರೀಕ್ಷೆ ನಡೆಸಿತ್ತು.

ಆದ್ರೆ ಫಲಿತಾಂಶ ವಿಳಂಬವಾಗಿದ್ದರಿಂದ ರೊಚ್ಚಿಗೆದ್ದ ಅಭ್ಯರ್ಥಿಗಳು ಭಿಕ್ಷೆ ಬೇಡುವ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದರು. ರಕ್ತದಲ್ಲಿ ಪತ್ರ ಬರೆದು ಫಲಿತಾಂಶ ಪ್ರಕಟಿಸುಂತೆ ಸರ್ಕಾರಕ್ಕೆ ಒತ್ತಾಯಿಸಿದ್ದರು.

ಇದೀಗ ರಾಜ್ಯ ಸರ್ಕಾರ ಅಕ್ಟೊಬರ್ 21ರಂದು ಪಿಎಸ್‌ಐ ನೇರ ನೇಮಕಾತಿಗಳ 01.01.2023ರ ಸುತ್ತೋಲೆಯ ಅನ್ವಯ ಆಯ್ಕೆ ಪಟ್ಟಿ ತಯಾರಿಸಿ ಪ್ರಕಟಗೊಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಂಎಲ್‌ಸಿ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ, ಕುತೂಹಲ ಮೂಡಿಸಿದ ಸೈನಿಕನ ನಡೆ