Select Your Language

Notifications

webdunia
webdunia
webdunia
webdunia

ಹೊಸದಾಗಿ 4244 ಅಂಗನವಾಡಿ ಕೇಂದ್ರಗಳ ಆರಂಭಕ್ಕೆ ರಾಜ್ಯ ಸರ್ಕಾರ ನಿರ್ಧಾರ..!

The state government has decided to start 4244 new Anganwadi centers
bangalore , ಭಾನುವಾರ, 4 ಸೆಪ್ಟಂಬರ್ 2022 (19:29 IST)
ಬಡವರು, ವಲಸೆ ಕಾರ್ಮಿಕರು, ಭೂಮಿರಹಿತ  ವಾಸಿಸುವ ಸ್ಥಳ ಗಳಲ್ಲಿ  ಅಂಗನವಾಡಿ ಆರಂಭಕ್ಕೆ ರಾಜ್ಯ ಸರ್ಕಾರ ಅಸ್ತು ಎಂದಿದೆ.ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸುಮಾರು 268.98 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸದಾಗಿ 4244 ಅಂಗನವಾಡಿಗಳ ನಿರ್ಮಾಣ ಮಾಡಲಿದ್ದಾರೆ.
 
 ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ವತಿಯಿಂದ ಆಡಳಿತಾತ್ಮಕವಾಗಿ ಅನುಮೋದನೆ ದೊರಕಿದೆ.ಪ್ರಸ್ತುತ ರಾಜ್ಯದಲ್ಲಿ 66361 ಅಂಗನವಾಡಿಗಳು ಕಾರ್ಯ ನಿರ್ವಹಿಸುತ್ತಿವೆ.
ಇವುಗಳ ಮೂಲಕ  ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ,  ಗರ್ಭಿಣಿ ಮಹಿಳೆಯರು ಹಾಗೂ ಬಾಣಂತಿಯರಿಗೆ  ಪೂರಕ ಪೌಷ್ಠಿಕ ಆಹಾರ, ಪೌಷ್ಠಿಕತೆ ಹಾಗೂ ಆರೋಗ್ಯ ಶಿಕ್ಷಣ ಸೇರಿದಂತೆ 6 ಸೇವೆ ಗಳನ್ನು  ಒದಗಿಸಲಾಗುತ್ತಿದೆ.ಮಕ್ಕಳ ಸಮಗ್ರ ಅಭಿವೃದ್ದಿ ಯೋಜನೆ ಅಡಿಯಲ್ಲಿ ಗ್ರಾಮೀಣ ಭಾಗಗಳಲ್ಲಿ 1,665 ನಗರ ಪ್ರದೇಶಗಳಲ್ಲಿ 2,589  ಅಂಗನವಾಡಿ ಕೇಂದ್ರಗಳು ಸ್ಥಾಪನೆಯಾಗಲಿವೆ.ಸುಮಾರು 16 ಲಕ್ಷ ಕುಟುಂಬಗಳ ಮಕ್ಕಳ ಪೌಷ್ಠಿಕಾಂಶ ಆಹಾರ ಮತ್ತು  ಶಾಲಾ ಪೂರ್ವ ಶಿಕ್ಷಣಕ್ಕೆ ಅನುಕೂಲವಾಗಲಿದೆ.ಜೊತೆಗೆ ಸುಮಾರು 8100 ಮಹಿಳೆಯರಿಗೆ ಉದ್ಯೋಗ ಅವಕಾಶ  ದೊರೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಧೀನ ಕಾರ್ಯದರ್ಶಿಗಳು ತಮ್ಮ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಂಟಿಸಿಗೆ ಬಿಳಿ ಯಾನೆಯಾದ ವೋಲ್ವೋ ಬಸ್ ಗಳು..!