Webdunia - Bharat's app for daily news and videos

Install App

ಅರಮನೆ ನೋಡಲು ಬರುವವರಿಗೆ ಗುಡ್‌ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

Sampriya
ಬುಧವಾರ, 14 ಆಗಸ್ಟ್ 2024 (20:28 IST)
Photo Courtesy X
ಮೈಸೂರು: ಅರಮನೆಗೆ ಭೇಟಿ ನೀಡಲು ಬಯಸುವ ಪ್ರವಾಸಿಗರು ಇನ್ಮುಂದೆ ಟಿಕೆಟ್‌ಗಾಗಿ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆಯಿಲ್ಲ. ಯಾಕೆಂದರೆ ಇನ್ಮುಂದೆ  ಇಲ್ಲಿನ ಅಂಬಾವಿಲಾಸ ಅರಮನೆಯ ಪ್ರವೇಶ ಟಿಕೆಟ್‌ಗಳನ್ನು ವಾಟ್ಸ್‌ಆ್ಯಪ್‌ನಲ್ಲೂ ಪಡೆಯುವುದಕ್ಕೆ ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಸರ್ಕಾರದ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯ (ಇಡಿಸಿಎಸ್)ದಿಂದ ಮೊಬೈಲ್ ಒನ್ ಯೋಜನೆಯ ಮೂಲಕ, ಮೊಬೈಲ್ ಫೋನ್‌ ಮೂಲಕ ಟಿಕೆಟ್‌ ಖರೀದಿಸಲು ‘ವಾಟ್ಸ್‌ಆ್ಯಪ್‌ ಟಿಕೆಟಿಂಗ್‌’ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ.

ಇದರಿಂದ ಪ್ರವಾಸಿಗರು ಮುಂಚೆನೆ ಟಿಕೆಟ್ ಪಡೆದು, ತಮ್ಮ ಸಮಯವನ್ನು ಉಳಿತಾಯ ಮಾಡಿ, ಅರಮನೆ ಸೌಂದರ್ಯವನ್ನು ಮತ್ತಷ್ಟು ಎಂಜಾಯ್ ಮಾಡ್ಬೋದು.

ಈ ಉಪಕ್ರಮ ಬುಧವಾರದಿಂದಲೇ ಜಾರಿಗೆ ಬಂದಿದೆ. ವಾಟ್ಸ್‌ಆ್ಯಪ್‌ ಸಂ: 88841 60088ಗೆ ‘Hi’ ಎಂದು ಟೈಪ್ ಮಾಡುವ ಮೂಲಕ ಅಥವಾ ಅರಮನೆ ಮಂಡಳಿಯ ಜಾಲತಾಣ https://mysorepalace.karnataka.gov.inನಲ್ಲಿ ನೀಡಿರುವ ವಾಟ್ಸ್‌ಆ್ಯಪ್‌ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಕನ್ನಡ ಅಥವಾ ಇಂಗ್ಲಿಷ್‌ನಲ್ಲಿ ಟಿಕೆಟ್‌ ಖರೀದಿಸಬಹುದಾಗಿದೆ.

ಆ ಟಿಕೆಟ್‌ಗಳ ವ್ಯಾಲಿಡಿಸಿ ಖರೀದಿಸಿದ ದಿನದಿಂದ ಐದು ದಿನಗಳವರೆಗೆ ಇರುತ್ತದೆ. ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಅರಮನೆಯನ್ನು ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments