Select Your Language

Notifications

webdunia
webdunia
webdunia
webdunia

ಕೇಸರಿ ಶಾಲು, ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ರಾಜ್ಯ ಸರ್ಕಾರ ಖಡಕ್ ಸೂಚನೆ

ಕೇಸರಿ ಶಾಲು, ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ರಾಜ್ಯ ಸರ್ಕಾರ ಖಡಕ್ ಸೂಚನೆ
bangalore , ಶುಕ್ರವಾರ, 4 ಫೆಬ್ರವರಿ 2022 (19:54 IST)
ಕರ್ನಾಟಕದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಕೇಸರಿ ಶಾಲು, ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ.
ಹಿಜಾಬ್ (Hijab) ಅಥವಾ ಕೇಸರಿ ಶಾಲು (Saffron Shawl) ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ನೀಡುವುದಿಲ್ಲ.
ಉಡುಪಿಯ ಕುಂದಾಪುರ ಸರ್ಕಾರಿ ಕಾಲೇಜಿನ ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಬೊಮ್ಮಾಯಿ ಅವರಿಗೆ ಮಾಹಿತಿ ನೀಡಿದರು. ಸಮವಸ್ತ್ರ ಸಂಹಿತೆ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಇಲಾಖೆ ಮತ್ತು ಪಿಯು ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ನಂತರ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಈ ವಿಚಾರ ಪ್ರಸ್ತುತ ನ್ಯಾಯಾಲಯದಲ್ಲಿದೆ. ಅಡ್ವೊಕೇಟ್ ಜನರಲ್ ಅವರೊಂದಿಗೆ ಮುಖ್ಯಮಂತ್ರಿ ಚರ್ಚಿಸಿದ್ದಾರೆ. ಕಾನೂನು ತಜ್ಞರ ಸಲಹೆ ಪಡೆದು ಮುಂದುವರಿಯಬೇಕಿದೆ. ಸರ್ಕಾರದ ನಿಲುವನ್ನು ಕೋರ್ಟ್​ಗೆ ಮನವರಿಕೆ ಮಾಡಿಕೊಡಲು ಅಡ್ವೊಕೇಟ್ ಜನರಲ್​ಗೆ ಸೂಚಿಸಿದ್ದಾರೆ. ಹೈಕೋರ್ಟ್​ ತೀರ್ಪು ಬರುವವರೆಗೆ ಸಮವಸ್ತ್ರ ಸಂಹಿತೆ ಪಾಲಿಸಬೇಕು ಎನ್ನುವುದನ್ನು ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸುತ್ತೇವೆ. ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುತೇವೆ
ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್  ಸ್ಪಷ್ಟಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಂಗೇರಿ ಉಪನಗರದಲ್ಲಿ ಪ್ರಸಿದ್ದ ಅರುಣಾ ಸಿಲ್ಕ್‌ ನೂತನ ಶೋರೂಮ್‌