ಕಾವೇರಿ ಹೋರಾಟದ ವೇಳೆ ರೈತರ ಮೇಲೆ ಹಾಕಿದ್ದ ಕೇಸು ವಾಪಸ್ ಪಡೆದ ರಾಜ್ಯ ಸರ್ಕಾರ

Webdunia
ಶನಿವಾರ, 23 ಫೆಬ್ರವರಿ 2019 (11:09 IST)

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ಹೋರಾಟದ ಸಂದರ್ಭದಲ್ಲಿ ರೈತರ ಮೇಲೆ ಹಾಕಿದ್ದ ಕೇಸುಗಳನ್ನು ವಾಪಸ್ ಪಡೆಯಲು, ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಮೂಲಕ ರೈತರಿಗೆ ಸಿಹಿಸುದ್ದಿ  ನೀಡಿದೆ.


ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ‘ಕ್ಯಾಬಿನೆಟ್ ಉಪ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕಾವೇರಿ ಹೋರಾಟದ ಸಮಯದಲ್ಲಿ ರೈತರ ಮೇಲೆ ದಾಖಲಾಗಿದ್ದ ಶೇ.95 ರಷ್ಟು ಕೇಸುಗಳನ್ನು ಕೈಬಿಡಲು ಸರ್ಕಾರ ತೀರ್ಮಾನಿಸಿದೆ’ ಎಂದು ತಿಳಿಸಿದ್ದಾರೆ.


‘ಈಗಾಗಲೇ ರೈತರ ಮೇಲೆ ಹೂಡಿರುವ ಕೇಸುಗಳ ಬಗ್ಗೆ ತಾಲೂಕುವಾರು ಮಾಹಿತಿ ಕಲೆ ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೋರಾಟದ ಸಂದರ್ಭದಲ್ಲಿ ಸರ್ಕಾರದ ಆಸ್ತಿ-ಪಾಸ್ತಿ ನಷ್ಟ ಮಾಡಿರುವ ಕೇಸುಗಳು ವಾಪಸ್ ಪಡೆಯಲಿದ್ದೇವೆ. ಆದರೆ ಖಾಸಗಿ ಆಸ್ತಿ ನಷ್ಟಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಕ್ಯಾಮೆರಾ, ಕಾರುಗಳ ಜಖಂ, ಅಂಗಡಿ, ಮುಗ್ಗಟ್ಟು ಮೇಲೆ ಕಲ್ಲು ತೂರಾಟ, ಪಾಂಡವಪುರ ಜಡ್ಜ್ ಮನೆ ಮೇಲೆ ದಾಳಿ ಸೇರಿದಂತೆ ಖಾಸಗಿಯಾಗಿ ನೀಡಿರುವ ಕೇಸುಗಳು ಕೋರ್ಟ್ ನಲ್ಲೇ ಇತ್ಯರ್ಥ ಮಾಡಿಕೊಳ್ಳಬೇಕು’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಫಲಿತಾಂಶ ಬೆನ್ನಲ್ಲೇ ರಾಹುಲ್ ಗಾಂಧಿಯನ್ನು ಭೇಟಿಯಾದ ಸಿದ್ದರಾಮಯ್ಯ

ಕೇಳಿದಾಗ ಮೊಬೈಲ್ ಕೊಡಿಸಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ

ಕೊಡಗು ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆಗಿಳಿದ ಖಾಕಿಗೆ ಶಾಕ್‌

ದೆಹಲಿ ಸ್ಫೋಟ ಹಿಂದಿನ ಶಂಕಿತೆ ದೇಶದಿಂದ ಪಲಾಯನಕ್ಕೆ ಸ್ಕೆಚು, ಬಯಲಾಗಿದ್ದು ಹೇಗೇ ಗೊತ್ತಾ

ರಾಣಿ ಚನ್ನಮ್ಮ ಮೃಗಾಲಯದಲ್ಲಿ ಇದೆಂಥಾ ಘಟನೆ, ಕೃಷ್ಣಮೃಗಗಳಿಗೆ ಆಗಿದ್ದಾದರೂ ಏನು

ಮುಂದಿನ ಸುದ್ದಿ
Show comments