Select Your Language

Notifications

webdunia
webdunia
webdunia
webdunia

ಕಾವೇರಿ ವಿಚಾರವಾಗಿ ರಾಜ್ಯ ಸರ್ಕಾರ ಎಡವಿದೆ

Cauvery issue
bangalore , ಬುಧವಾರ, 27 ಸೆಪ್ಟಂಬರ್ 2023 (18:00 IST)
ಕಾವೇರಿ ನೀರಿನ ವಿಚಾರವಾಗಿ ರಾಜ್ಯ ಸರ್ಕಾರ ಎಡವಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಮಿಳುನಾಡು ಮೂರನೇ ಬೆಳೆ ಬೆಳೆಯಲು ನೀರು ಉಪಯೋಗ ಮಾಡಿದಾಗ ಎಚ್ಚರಿಕೆ ವಹಿಸಬೇಕಿತ್ತು. ಇದಕ್ಕೆ ಆ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಬೇಕಿತ್ತು. ಆದರೆ ಮೂರನೇ ಬೆಳೆಗೆ ಒಂದು ಟಿಎಂಸಿ ಉಪಯೋಗ ಮಾಡ್ತಿದೆ. ಇದನ್ನು ಸುಪ್ರೀಂ ಕೋರ್ಟ್​​​​ಗೆ ಮನವರಿಕೆ ಮಾಡಬೇಕಿತ್ತು. ಇವಾಗ ನೀರು ಖಾಲಿ ಆಗಿದೆ, ಕುಡಿಯುವ ನೀರಿನ ಸಮಸ್ಯೆ ಆಗ್ತಿದೆ. ಒಟ್ಟಾರೆ ರಾಜ್ಯ ಸರ್ಕಾರ ರಾಜಕೀಯ ಮಾಡ್ತಿದೆ. ಪ್ರಾಮಾಣಿಕ ಕೆಲಸ ಮಾಡ್ತಿಲ್ಲ, ಇದು ದುರದೃಷ್ಟಕರ. ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಆಗ್ರಹ ಮಾಡುವುದು ಸಿಎಂಗೆ ಶೋಭೆ ತರಲ್ಲ ಎಂದು ಕಿಡಿಕಾರಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ನೀರು ಇದೆ ಅಂತಾ ಮಾತಾಡೋದು ಎಷ್ಟು ಸರಿ