ಬೆಂಗಳೂರು: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಜನರ ಸಮಸ್ಯೆ ಬಗ್ಗೆ ಚರ್ಚೆ ಮಾಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಆರೋಪ ಮಾಡಿದರು.
ಅನ್ನಭಾಗ್ಯ, ಗೃಹಲಕ್ಷ್ಮಿ ಕಳೆದ 4-5 ತಿಂಗಳಿಂದ ಹಾಕದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರದವರು ರಾಜ್ಯದ ಜನರ ಸಮಸ್ಯೆ ಬಗ್ಗೆ ಚರ್ಚೆ ಮಾಡುತ್ತಿಲ್ಲ.
ಮಾಧ್ಯಮಗಳು ಸುದ್ದಿ ಮಾಡಿದರೆ ಮಾಧ್ಯಮಗಳಿಗೆ ಕೆಲಸ ಇಲ್ಲ ಎನ್ನುತ್ತಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ನಡೆಸುತ್ತಿರುವ ಆಡಳಿತದ ಬಗ್ಗೆ ನೋಡುತ್ತಿದ್ದೇವೆ ಎಂದು ಲೇವಾಡಿ ಮಾಡಿದರು.
ವಾರ ಕಳೆದ ಮೇಲೆ ಮತ್ತಷ್ಟು ವಿಷಯಗಳ ಬಗ್ಗೆ ಚರ್ಚೆ ಮಾಡೋಣ ಎಂದು ಹೊಸ ಬಾಂಬ್ ಸಿಡಿಸಿದರು. ನಮಗೂ ರಾಜ್ಯದ ವಿಷಯಗಳ ಬಗ್ಗೆ ನಮ್ಮದೇ ಆದ ಕಮಿಟ್‌ಮೆಂಟ್ ಇಟ್ಟುಕೊಂಡಿದ್ದೇವೆ. ಇವರು ಯಾರಿಂದಲೂ ನಾವು ಹೇಳಿಸಿಕೊಳ್ಳಬೇಕಿಲ್ಲ ಎಂದು ವಾಗ್ದಾಳಿ ನಡೆಸಿದರು