Select Your Language

Notifications

webdunia
webdunia
webdunia
Wednesday, 9 April 2025
webdunia

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡ ಧ್ವಜವನ್ನು ಹಾರಿಸಬಾರದು ಎಂದ ರಾಜ್ಯ ಸರ್ಕಾರ

ಬೆಂಗಳೂರು
ಬೆಂಗಳೂರು , ಶುಕ್ರವಾರ, 1 ನವೆಂಬರ್ 2019 (10:39 IST)
ಬೆಂಗಳೂರು : ಕನ್ನಡ ರಾಜ್ಯೋತ್ಸವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯೊಂದು ವಿವಾದಕ್ಕೆ ಕಾರಣವಾಗಿದೆ.




ಇಂದು ಕನ್ನಡ ರಾಜ್ಯೋತ್ಸವದ ಹಿನ್ನಲೆಯಲ್ಲಿ ರಾಜ್ಯದ ಯಾವ ಭಾಗದಲ್ಲಿಯೂ ಕನ್ನಡ ಧ್ವಜವನ್ನು ಹಾರಿಸಬಾರದು, ಎಲ್ಲಾ ಶಾಲಾ ಕಾಲೇಜುಗಳಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಕೇವಲ ರಾಷ್ಟ್ರಧ್ವಜವನ್ನು ಹಾರಿಸಬೇಕು ಎಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ  ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.


ಈ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದ್ದು, ದಶಕಗಳಿಂದ ಕನ್ನಡದ ಅಸ್ಮಿತೆಯ ಪ್ರತಿಬಿಂಬವಾದ ನಾಡಧ್ವಜ ಹಾರಾಟಕ್ಕೆ ಅವಕಾಶ ನೀಡದೆ ಇರುವ ಮೂಲಕ ಬಿಜೆಪಿ ಸರ್ಕಾರ ಕನ್ನಡಿಗರ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದೆ. ಕರ್ನಾಟಕದಲ್ಲಿ ನಾಡಧ್ವಜವಲ್ಲದೇ ಭಗವಾಧ್ವಜ ಹಾರಿಸಬೇಕೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಕಿಡಿಕಾರಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡದಲ್ಲಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ