Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಇರುವುದು ಕೊಲೆಗಡುಕರ ಸರ್ಕಾರ– ಡಿವಿಎಸ್ ಟೀಕೆ

ರಾಜ್ಯದಲ್ಲಿ ಇರುವುದು ಕೊಲೆಗಡುಕರ ಸರ್ಕಾರ– ಡಿವಿಎಸ್ ಟೀಕೆ
ಕೋಲಾರ , ಶನಿವಾರ, 13 ಜನವರಿ 2018 (15:24 IST)
ರಾಜ್ಯದಲ್ಲಿ ಕೊಲೆಗಡುಕರ ಸರ್ಕಾರ ಅಧಿಕಾರದಲ್ಲಿದ್ದು ಹೆಣ್ಣು ಮಕ್ಕಳು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಟೀಕಿಸಿದ್ದಾರೆ.
 
ಕೋಲಾರ ಜಿಲ್ಲೆಯ ಶ್ರೀನಿವಾಸ ಪುರದಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಎಲ್ಲೆಡೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಕರಣಗಳ ವಿರುದ್ಧ ಕ್ರಮ ಜರುಗಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ.
 
ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದ್ದು, ನಮ್ಮ ಸರ್ಕಾರವೇ ಎತ್ತಿನಹೊಳೆ ಯೋಜನೆಯನ್ನು ಲೋಕಾರ್ಪಣೆ ಮಾಡುತ್ತದೆ. ಕಾಂಗ್ರೆಸ್‌ನವರು ನೀರಾವರಿ ಯೋಜನೆ ಹೆಸರಿನಲ್ಲಿ ಕೋಲಾರ ಜಿಲ್ಲೆಯ ಜನರಿಗೆ ವಿಷಪೂರಿತ ನೀರು ಕುಡಿಸಲು ಹೊರಟಿದ್ದಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ದಲಿತರು ಕಾಂಗ್ರೆಸ್‌ಗೆ ಮತ ನೀಡಬಾರದು– ಕಾರಣ ಹೇಳಿದ ಬಿಎಸ್‌ವೈ