Select Your Language

Notifications

webdunia
webdunia
webdunia
Friday, 11 April 2025
webdunia

ರಾಜ್ಯವನ್ನು ಇಬ್ಬಾಗ ಮಾಡಿಕೊಂಡು ಪ್ರಚಾರ ನಡೆಸಲಾಗುತ್ತಿದೆ- ಪರಂ

ಜಿ.ಪರಮೇಶ್ವರ್
ಬೆಂಗಳೂರು , ಮಂಗಳವಾರ, 9 ಜನವರಿ 2018 (18:32 IST)

ರಾಜ್ಯವನ್ನು ಇಬ್ಬಾಗ ಮಾಡಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಾನು ಪ್ರಚಾರ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಚಾರಕ್ಕೆ ಹೋದಕಡೆಯಲ್ಲೆಲ್ಲ ಉತ್ತಮ ಸ್ಪಂದನೆ ದೊರೆಯುತ್ತಿದೆ. ಹಣಕೊಟ್ಟು ಜನರನ್ನು ಕರೆಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎರಡು ತಂಡಗಳಲ್ಲಿ ರಾಜ್ಯದಲ್ಲಿ ಪ್ರಚಾರ ನಡೆಸುತ್ತಿದ್ದು, ಜನರು ಕಾಂಗ್ರೆಸ್ ಪರವಾಗಿ ಇರುವುದು ಗಮನಕ್ಕೆ ಬಂದಿದೆ. ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಶಾಸಕರ ಬಗ್ಗೆಯೂ ಮಾಹಿತಿ ಪಡೆಯಲಾಗುತ್ತಿದೆ ಎಂದಿದ್ದಾರೆ.

ಕಾಂಗ್ರೆಸ್ ಜನರಿಗೆ ಕೊಟ್ಟಿರುವ ಭರವಸೆಗಳ ಬಗ್ಗೆ ಜನರಿಂದ ಪ್ರತಿಕ್ರಿಯೆ ಪಡೆಯಲಾಗುತ್ತಿದೆ. ಮುಂದೆಯೂ ಕಾಂಗ್ರೆಸ್ ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗುವುದು ಖಚಿತ- ಸಿದ್ದರಾಮಯ್ಯ