Publish Date: Fri, 12 Mar 2021 (12:04 IST)
Updated Date: Fri, 12 Mar 2021 (12:06 IST)
ಬೆಂಗಳೂರು : ಜೆಡಿಎಸ್ ನ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಈ ಬಗ್ಗೆ ಡಿಕೆಶಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಸಹಕರಿಸುವೆ. ರಾಜ್ಯಕ್ಕೆ ಕಾಂಗ್ರೆಸ್ ಪಕ್ಷದ ಅವಶ್ಯಕತೆ ಇದೆ. ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಆರಂಭಿಸಿದೆ.
ಹೆಚ್.ಡಿ.ಕುಮಾರಸ್ವಾಮಿಯನ್ನ ಅಣ‍್ಣನ ಸ್ಥಾನದಲ್ಲಿ ನೋಡಿದ್ದೇನೆ. ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದ್ದಾರೆ.